ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ, ಬಿ, ದಯಾನಂದ ನೇಮಕ…!!!

ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಕಮೀಷನರ್‌ ಆಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ನೇಮಿಸಲಾಗಿದೆ.

ಇನ್ನು ಬೆಂಗಳೂರು ನಗರದ ಸಂಚಾರ ವಿಭಾಗದ ವಿಶೇಷ ಕಮಿಷನರ್ ಆಗಿದ್ದ ಎಂಎ ಸಲೀಂರನ್ನು ಸಿಐಡಿ ಡಿಜಿಯಾಗಿ ನೇಮಿಸಿ ಸರ್ಕಾರ ಆದೇಶ ಜಾರಿ ಮಾಡಿದೆ.

ಮತ್ತು ಈ ವರ್ಷದ ಹಿಂದೆಯಷ್ಟೇ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಿಸಲಾಗಿತ್ತು. ಇತ್ತೀಚೆಗೆ ಅವರನ್ನು ಪೊಲೀಸ್‌ ಮಹಾನಿರ್ದೇಶಕರ ಹುದ್ದೆಗೆ ಬಡ್ತಿ ನೀಡಿ ಅಲ್ಲಿಯೇ ಮುಂದುವರೆಸಲಾಗಿತ್ತು. ಇದೀಗ ಇವರ ಸ್ಥಾನಕ್ಕೆ 1994ರ ಬ್ಯಾಚ್‌ನ ಬಿ.ದಯಾನಂದ್ ಅವರನ್ನು ನೇಮಿಸಲಾಗಿದೆ. ದಯಾನಂದ್‌ ಅವರು ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂದವರು ಎಂದು ತಿಳಿದುಬಂದಿದೆ. ಈ ಹಿಂದೆ ಇವರು ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್‌ ಕಮೀಷನರ್‌ (ಸಂಚಾರ) ಆಗಿ ಸೇವೆ ಸಲ್ಲಿಸಿದ್ದರು…

ವರದಿ, ಎಚ್ಚರಿಕೆ ಕನ್ನಡ ನ್ಯೂಸ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend