ರಾಜ್ಯದಲ್ಲಿ ಹಲವೆಡೆ ಬೆಳ್ಳಂಬೆಳಿಗ್ಗೆ ಭ್ರಷ್ಟರ ಮನೆಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು…!!!

ಬೆಂಗಳೂರು ನಗರದಲ್ಲೂ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬಸವೇಶ್ವರನಗರದಲ್ಲಿರುವ ಬೆಸ್ಕಾಂ ವಿಭಾಗದ ತಾಂತ್ರಿಕ ಅಧಿಕಾರಿ ರಮೇಶ್ ಮನೆ, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಮೈಸೂರಿನಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು ಪಾಲಿಕೆ ಅಧಿಕಾರಿ ಮಹೇಶಱ ಕುಮಾರ್ ಮನೆ , ತೋಟದ ಮನೆ ಸೇರಿ ಹಲವು ಕಡೆ ದಾಳಿ ಮಾಡಲಾಗಿದೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ್ ಶೆಟ್ಟರ್ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಹಾವೇರಿಯ ನಿರ್ಮಿತಿ ಕೇಂದ್ರದ ಕಚೇರಿಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾವೇರಿಯ ದೇವಗಿರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ನಿರ್ಮಿತಿ ಕೇಂದ್ರದಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ತುಮಕೂರು ನಗರದಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರ್.ಟಿ.ನಗರದ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನುವ ಒಂದು ದೊರೆತಿದೆ…

ವರದಿ. ಎಚ್ಚರಿಕೆ ಕನ್ನಡ ನ್ಯೂಸ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend