ಕಸಾಪುರದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ
ಗುಡೇಕೋಟೆ, ಜೂ.04- ತಂಬಾಕು ಉತ್ಪನ್ನಗಳಿಗೆ ಜನರು ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿ ರುವುದು ವಿಷಾದನೀಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಮೇಲ್ವಿಚಾರಕರಾದ ಮಹಾಲಿಂಗಯ್ಯ ಕಳವಳ ವ್ಯಕ್ತಪಡಿಸಿದರು.
ಅವರು ಶನಿವಾರ ಗುಡೇಕೋಟೆ ವಲಯದ ಕಸಾಪುರ ಕಾರ್ಯಕ್ಷೇತ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಸಾಪುರ ಕಾರ್ಯಕ್ಷೇತ್ರದಿಂದ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ತಂಬಾಕು, ಬೀಡಿ, ಸಿಗರೇಟ್, ಮದ್ಯ, ಗುಟ್ಕಾ, ಗಾಂಜಾ ಮತ್ತಿತರೆ ಮಾದಕ ವಸ್ತು ಸೇವನೆಯಿಂದ ಆರೋಗ್ಯ ಹಾಳಾಗುತ್ತದೆ. ತಂಬಾಕಿನಿಂದ ದೂರವಿದ್ದು, ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಧರ್ಮಸ್ಥಳ ಗ್ರಾಮಾಭಿ ವೃದ್ಧಿ ಯೋಜನೆಯ ಕೂಡ್ಲಿಗಿ ತಾಲೂಕು ಯೋಜನಾಧಿಕಾರಿ ಸಂತೋಷ್ ಕುಮಾರ್ ಮಾತನಾಡಿ, ನಮ್ಮ ಯೋಜನೆ ನಾಗರಿಕ ಸಮಾಜ ಹಾಗೂ ದೇಶದ ಉನ್ನತಿಗೆ ಹಾಗೂ ಗ್ರಾಮಾಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸಿದೆ. ಮದ್ಯವರ್ಜನೆ ಶಿಬಿರ ಆಯೋಜಿಸಿ ಕ್ರಾಂತಿ ಮಾಡಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗುಡೇಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ನಾಗವೇಣಿ, ಗುಡೇಕೋಟೆ ವಲಯ ಮೇಲ್ವಿಚಾರಕರಾದ ಜ್ಯೋತಿಗುಡಿ,ಸೋಲರ್ ಮಂಜುನಾಥ್,ಕಸಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರುಗಳಾದ ಅಜಯ್, ಎಸ್ಡಿಎಂಸಿ ಅಧ್ಯಕ್ಷ ವಿರುಪಾಕ್ಷಪ್ಪ,ಗ್ರಾಪಂ ಸದಸ್ಯೆ ರತ್ನಮ್ಮಚಿನ್ನಸ್ವಾಮಿ,ಸೇವಾ ಪ್ರತಿನಿಧಿ ದುರುಗೇಶ್ ನಾಗರಹುಣಸೆ, ಸೇರಿದಂತೆ ಕಸಾಪುರ ಗ್ರಾಮದ ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
