;

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗಿಡ ನೆಡುವುದರ ಮೂಲಕ ವಿಶ್ವಪರಿಸರ ದಿನಾಚರಣೆಯನ್ನು ಆಚರಣೆ…!!!

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗಿಡ ನೆಡುವುದರ ಮೂಲಕ ವಿಶ್ವಪರಿಸರ ದಿನಾಚರಣೆಯನ್ನು ಆಚರಣೆ.

ಹರಪನಹಳ್ಳಿ:- ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್‌ 5ರಂದು ವಿಶ್ವಪರಿಸರ ದಿನವನ್ನು ಆಚರಿಸಲಾಗುತ್ತದೆ,ಪ್ರತಿ ವರ್ಷ ಬೇರೆ ಬೇರೆ ಧ್ಯೇಯ ವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ ಎಂದು ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಧಿಕಾರಿಗಳಾದ ಶಂಕರ್ ನಾಯ್ಕ ಎನ್ ತಿಳಿಸಿದರು.

ಹರಪನಹಳ್ಳಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜೂನ್‌ 5 ರಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಯಿತು ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ.ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ.

ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಭಿಸಿದೆ ಎಂದರೆ ತಪ್ಪಾಗಲಾರದು. ಇದರೆ ಇತ್ತಿಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂದು
ಡಾ.ದತ್ತಾತ್ರೇಯ ಪಿಸೆ
ತಾಲೂಕು ಆಸ್ಪತ್ರೆ ಮಕ್ಕಳ ವೈದ್ಯರು

ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್‌ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನ ತಡೆಯುವುದಾಗಿದೆ.

ಈ ಸಂದರ್ಭದಲ್ಲಿ ವೆಂಕಟೇಶ್ ಬಾಗಲಾರ್ ಶ್ರೀನಿವಾಸ್. ಡಾ.ಭಾರತಿ ಮಹಾಂತೇಶ್ ಡಾ.ರಾಜೇಶ್ ಬಿ ಆರ್ ಡಾ.ತಿಪ್ಪೇಸ್ವಾಮಿ ಡಾ. ಅಣ್ಣಿ ವಿನಯ್ ಕುಮಾರ್ ಸುಶ್ರುಕಾಧಿಕಾರಿ ಆರೋಗ್ಯಮೇರಿ ಪ್ರೇಮ
ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಇತರರು ಭಾಗಿಯಾಗಿದ್ದರು…

ವರದಿ. ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;