ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಬಾರದು – ಪಿಎಸ್ಐ ಮಾಲೀಕ್ ಸಾಹೇಬ್ ಕಲಾರಿ,ಕಿವಿಮಾತು.
ಗುಡೇಕೋಟೆ:- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಕೂಡ್ಲಿಗಿ, ಹಾಗೂ ವಲಯ ಕಚೇರಿ ಗುಡೇಕೋಟೆ, ಹಾಗೂ ಕರ್ನಾಟಕ ಪಬ್ಲಿಕ್ ಶಾಲಾ ಸರ್ಕಾರಿ ಪದವಿ ಪೂರ್ವ ಕಾಲೇಜು, ಗುಡೇಕೋಟೆ ಇವುಗಳ ಜಂಟಿ ಸಂಯುಕ್ತಾಶ್ರಯದಲ್ಲಿ “ದುಶ್ಚಟ ಮುಕ್ತ ಸಮಾಜಕ್ಕಾಗಿ ಸ್ವಾಸ್ಥ್ಯ ಸಂಕಲ್ಪ” ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವು ಕರ್ನಾಟಕ ಪಬ್ಲಿಕ್ ಶಾಲಾ ಕಾಲೇಜಿನಲ್ಲಿ ನಡೆಯಿತು.
ಗುಡೇಕೋಟೆ ಪೋಲೀಸ್ ಠಾಣೆಯ ಪಿಎಸ್ಐ ಮಾಲೀಕ್ ಸಾಹೇಬ್ ಕಲಾರಿ, ಎಲ್ಲರೂ ನೆಮ್ಮದಿಯಿಂದ ಜೀವನ ಮಾಡಬೇಕಾದರೆ ಆರೋಗ್ಯವಾಗಿರುವುದು ಬಹಳ ಮುಖ್ಯ, ಆರೋಗ್ಯವನ್ನು ಹಾಳು ಮಾಡುತ್ತಿರುವ ದುಶ್ಚಟಗಳಿಗೆ ಯುವ ಪೀಳಿಗೆ ಬಲಿಯಾಗಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತುಗಳನ್ನು ಹೇಳಿದರು.
ಅವರು ತಾಲೂಕಿನ ಗುಡೇಕೋಟೆ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಯನ್ನು ಅಲಂಕರಿಸಿ ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳಾಗಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಗುಡೇಕೋಟೆ ವಲಯ ಮೇಲ್ವಿಚಾರಕರಾದ ಜ್ಯೋತಿಗುಡಿ,ರವರು ವಿದ್ಯಾರ್ಥಿಗಳು ಪಟ್ಟ ಶ್ರಮಕ್ಕೆ ಪ್ರತಿಫಲ ಸಿಗಬೇಕಾದರೆ ಮೊದಲು ವಿದ್ಯಾಭ್ಯಾಸಕ್ಕೆ ಉತ್ತೇಜ ಕೊಡಬೇಕು, ಸಮಾಜದ ಅಭಿವೃದ್ಧಿ ಪೂರಕವಾದ ಕೆಲಸಗಳನ್ನು ಮಾಡಬೇಕು, ಸಮಸ್ಯೆಗಳ ವಿರುದ್ಧ ಹೋರಾಟ ಮಾಡಲು ಯುವಕ ಯುವತಿಯರು ಮುಂದಾಗಬೇಕು ಎಂದು ಹೇಳಿದರು.

ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ಪರ್ವಿನ್ ಬೇಗಂ, ಮಾತನಾಡಿ ವಿದ್ಯಾರ್ಥಿಗಳು ಸಾಧನೆ ಮಾಡಿ ಸನ್ಮಾನ ಸಿಕ್ಕಿದ ಮಾತ್ರಕ್ಕೆ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ಕೊಳ್ಳಬಾರದು, ಸಮಾಜದ ಅಭಿವೃದ್ಧಿಗೆ ಪೂರಕವಾದ ಕೆಲಸಗಳನ್ನು ಮಾಡಬೇಕು, ಪ್ರಸ್ತುತ ದಿನಮಾನಗಳಲ್ಲಿ ಎಲ್ಲರಲ್ಲೂ ಸ್ವಾರ್ಥ ತುಂಬಿದೆ, ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿದೆ, ಇವು ಸಮಾಜದ ಅಭಿವೃದ್ಧಿಗೆ ಮಾರಕವಾದವು, ಇಂದಿನ ಯುವ ಪೀಳಿಗೆ ಸಾಮಾಜಿಕ ಮೌಲ್ಯಗಳನ್ನು ಅರಿತು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜು ಹಿಊ ಉಪನ್ಯಾಸಕರಾದ ಕೆ.ನಾಗರಾಜ್, ಗಾಯಿತ್ರಿ,ಅಮೃತಾಜ್, ರಶ್ಮಿ, ಬಸವರಾಜ್, ಮತ್ತು ಸೇವಾ ಪ್ರತಿನಿಧಿಗಳಾದ ಕವಿತಾ, ಲಕ್ಷ್ಮಿ, ಮಹಾಲಕ್ಷ್ಮಿ, ಮತ್ತು ಐಶ್ವರ್ಯ ಸಂಗಡಿಗರು ಪ್ರಾರ್ಥಿಸಿದರು, ರಾಜೇಶ್ ಸ್ವಾಗತಿಸಿದರು,ಸೇವಾ ಪ್ರತಿನಿಧಿ ದುರುಗೇಶ್ ವಂದಿಸಿದರು, ಚಿದಾನಂದ ನಿರೂಪಿಸಿದರು.ಕಾಲೇಜ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು…

ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
