;

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿದ್ದ ಪ್ರಕರಣಕ್ಕೆ ಸಂಬಂದಪಟ್ಟಂತೆಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದೆ…!!!

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿದ್ದ ಪ್ರಕರಣಕ್ಕೆ ಸಂಬಂದಪಟ್ಟಂತೆ ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ ಐದಕ್ಕೆ ಎರಿದೆ. ಇಂದು ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಇಂದು ಪಾರ್ವತಮ್ಮ ಮತ್ತು ರುದ್ರಣ್ಣ ಎನ್ನುವವರು ಸಾವನ್ನಪ್ಪಿದ್ದಾರೆ ಅಂಥ ತಿಳಿದು ಬಂದಿದೆ.

ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಹಿನ್ನೆಲೆ 100 ಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಈ ನಡುವೆ ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆಯಿಂದ ನಾಲ್ವರ ಸಾವು ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಗರ ಸಭೆಯ ಎಇಇ ಸೇರಿದಂತೆ ಮೂವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ತನಿಖೆಯಲ್ಲಿ ಕಾರ್ಯವಿಧಾನದಲ್ಲಿ ಲೋಪವಾಗಿರುವ ಹಿನ್ನೆಲೆಯಲ್ಲಿ ಎಇಇ ಮಂಜುನಾಥ ಗಿರಡ್ಡಿ, ಜೆಇ ಕಿರಣ್, ವಾಲ್ವ್ ಮ್ಯಾನ್ ಪ್ರಕಾಶ್ ಬಾಬು ಅವರನ್ನು ಅಮಾನತು ಮಾಡಿ ಎಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ಆದೇಶ ಹೊರಡಿಸಿದ್ದಾರೆ.

ಪ್ರಕರಣದ ತನಿಖೆಯಲ್ಲಿ ಕಾರ್ಯವಿಧಾನದಲ್ಲಿ ಲೋಪವಾಗಿರುವ ಹಿನ್ನೆಲೆಯಲ್ಲಿ ಈ ಮೂವರನ್ನು ಅಮಾನತು ಮಾಡಿ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಗುತ್ತಿಗೆದಾರ ನೀರಗಂಟಿ ಸುರೇಶ ಕೆಲಸದಿಂದ ವಜಾ ಮಾಡಲಾಗಿದೆ.

ಈಗಾಗಲೇ ಕಲುಷಿತ ನೀರು ಸೇವನೆಯಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ನಿನ್ನೆ ಲ್ಯಾಬ್ ವರದಿಯ ಪ್ರಕಾರ ನೀರಿನಲ್ಲಿ ಯಾವುದೇ ವಿಷಕಾರಿ ಅಂಶ ಇಲ್ಲ ಕಾಲರಾ ರೋಗದ ಮಾದರಿ ಪತ್ತೆಯಾಗಿದೆ ಎಂದು ವರದಿಯಲ್ಲಿ ಹೇಳಲಾಗಿತ್ತು. ಆದರೂ ಗ್ರಾಮಸ್ಥರು ಈ ಪ್ರಕರಣದ ಕುರಿತಂತೆ ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ…

ವರದಿ, ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;