ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ, ಸ್ಪಂದನಾ ಹೃದಯಾಘಾದಿಂದ ಸಾವು…!!!

ಬೆಂಗಳೂರು :ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾರೋ ಅಥವಾ ಬೆಂಗಳೂರಲ್ಲಿ ಇದ್ದರ ಎನ್ನುವ ಮಾಹಿತಿ ಇನ್ನು ತಿಳಿದುಬಂದಿಲ್ಲ, ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದು, ಈ ಸುದ್ದಿ ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ.

ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ.

2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದು, ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು.

ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ ಎಂದು ಕೆಲವು ಮಾಹಿತಿಗಳಿಂದ ತಿಳಿದು ಬಂದಿದೆ…

ವರದಿ, ನ್ಯೂಸ್ ಬ್ಯುರೋ ಎಚ್ಚರಿಕೆ ಕನ್ನಡ ನ್ಯೂಸ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend