;

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಭೂಮಿ ತಂತ್ರಾಂಶ, ಕಂದಾಯ ವಿಷಯ ತರಬೇತಿ…!!!

ಭೂಮಿ ತಂತ್ರಾಂಶ, ಕಂದಾಯ ವಿಷಯ ತರಬೇತಿ

ಕೊಪ್ಪಳ : ಜಿಲ್ಲೆಯ ಎಲ್ಲ ತಹಶೀಲ್ದಾರರು, ಭೂದಾಖಲೆ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಗಳ ಎಲ್ಲಾ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಭೂಮಿ ತಂತ್ರಾಂಶ ಹಾಗು ಕಂದಾಯ ವಿಷಯಗಳ ಬಗ್ಗೆ ತರಬೇತಿ ಕಾರ್ಯಾಗಾರವು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಆಗಸ್ಟ್ 09ರಂದು ನಡೆಯಿತು.
ಇದೆ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಭೂಮಿ ತಂತ್ರಾಂಶವು ಕೇಂದ್ರ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ನಡೆಸುವ ಯೋಜನೆಯಾಗಿದ್ದು, ಕಾಗದದ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಹಾಗೂ ಕರ್ನಾಟಕದ ಭೂ ನೋಂದಾವಣೆಯಲ್ಲಿನ ಬದಲಾವಣೆಗಳನ್ನು ನಿಯಂತ್ರಿಸಲು ಈ ತಂತ್ರಾಂಶವು ವ್ಯವಸ್ಥೆಯನ್ನು ರಚಿಸುತ್ತದೆ. ಈ ವ್ಯವಸ್ಥೆಯ ಸಮಪರ್ಕವಾಗಿ ಅನುಷ್ಠಾನಕ್ಕೆ ಸಂಬಂಧಪಟ್ಟ ಅಧಿಕಾರಿಗಳು, ವಿಷಯ ನಿರ್ವಾಹಕರು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸರ್ಕಾರದ ಸೇವೆಗಳು ಎಲ್ಲರಿಗೂ ಸರಿಯಾದ ಸಮಯದಲ್ಲಿ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಹಮ್ಮಿಕೊಂಡ ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆದು ತಮ್ಮ ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.


ವಿಷಯ ಯಾವುದೇ ಇರಲಿ
ಮೊದಲು ಅದನ್ನು ಸರಿಯಾಗಿ ತಿಳಿದುಕೊಳ್ಳಬೇಕು. ಸಕಾಲ ಯೋಜನೆಯ ಕಾರ್ಯ ತಂತ್ರಾಂಶಗಳ ನಿಯಮಗಳನ್ನು ಪಾಲನೆ ಮಾಡಬೇಕು. ಈ ಯೋಜನೆಯಲ್ಲಿ ಮೊದಲು ಸಮಯ ಪಾಲನೆ ಮಾಡುವುದನ್ನು ಕಲಿತುಕೊಳ್ಳಬೇಕು ಎಂದರು.
ಭೂಮಿ ತಂತ್ರಾಶದ ಹಾಗೂ ಕಂದಾಯ ಸೇವೆಗಳು ಸಾರ್ವಜನಿಕರಿಗೆ ತ್ವರಿತವಾಗಿ ಸಿಗುವಂತಾಗಬೇಕು. ಈ ಹಿನ್ನೆಲೆಯಲ್ಲಿ ತಹಶೀಲ್ದಾರರು ತಾಲೂಕು ಮಟ್ಟದಲ್ಲಿ ಪರಿಶೀಲನಾ ಸಭೆಗಳನ್ನು ನಡೆಸಿ ಕ್ರಮಕೈಗೊಳ್ಳಬೇಕು. ಯಾವುದೇ ವಿಷಯಗಳ ಬಗ್ಗೆ ತಿಳಿಯಲು ಅಥವಾ ಸಮಸ್ಯೆಗಳಿದ್ದಲ್ಲಿ ಮುಕ್ತವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕಾರ್ಯಗಾರದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೇರಿದಂತೆ ವಿವಿಧ ತಾಲೂಕುಗಳ ತಹಸೀಲ್ದಾರರು, ಭೂದಾಖಲೆ ಅಧಿಕಾರಿಗಳು, ಉಪ ತಹಶೀಲ್ದಾರರು, ಶೀರಸ್ತೆದಾರರು, ಕಂದಾಯ ನಿರೀಕ್ಷಕರು ಸೇರಿದಂತೆ ಕಂದಾಯ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು…

ವರದಿ. ಸಂಗೀತ ಪಾಟೀಲ್, ಕೊಪ್ಪಳ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;