;

ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ: 24 ಪ್ರಕರಣ ದಾಖಲು….!!!

ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ: 24 ಪ್ರಕರಣ ದಾಖಲು
ದಾವಣಗೆರೆ : ನಗರದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘನೆಯ 24 ಪ್ರಕರಣಗಳನ್ನು ದಾಖಲಿಸಿ, 3600 ರೂ. ದಂಡ ವಿಧಿಸಲಾಗಿದೆ.
ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದೊಂದಿಗೆ ಬಸವ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಧಿಕಾರಿಗಳ ತಂಡ ಬುಧವಾರ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ನಿಯಮ ಉಲ್ಲಂಘಿಸಿದವರ ಪ್ರಕರಣ ದಾಖಲಿಸಿದೆ. ಕೋಟ್ಪಾ ಕಾಯ್ದೆ-2003 ಕಾಯ್ದೆಯ ಪ್ರಕಾರ ಮುಂದಿನ ದಿನಗಳಲ್ಲಿ ತಂಬಾಕು ವ್ಯಾಪಾರಸ್ಥರಿಗೆ ಪ್ರತ್ಯೇಕ ಪರವಾನಗಿ ನೀಡಲಾಗುವುದು ಎಂದು ಅಧಿಕಾರಿಗಳ ತಂಡ ಸೂಚನೆ ನೀಡಿದೆ.
ದಾಳಿಯಲ್ಲಿ ಬಸವ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಶಿವಪ್ಪ, ಎ.ಎಸ್.ಐ, ಸುರೇಶ್,ಜೆ, ಕೆ.ಗಗನ್, ಪವನ್, ಶ್ರೀಧರಮೂರ್ತಿ, ಮಹಾನಗರ ಪಾಲಿಕೆ, ಮಹಮದ್, ಶಿಕ್ಷಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸತೀಶ್ ಕಲಹಾಳ್, ಜಿಲ್ಲಾ ಸಲಹೆಗಾರ, ಕೆ.ಪಿ.ದೇವರಾಜ್, ಸಮಾಜ ಕಾರ್ಯಕರ್ತ ಹಾಜರಿದ್ದರು…

ವರದಿ. ಪ್ರಕಾಶ್, ಆರ್, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;