ಗೆದ್ದಲಗಟ್ಟೆ ಗ್ರಾಮಕ್ಕೆ ಸರ್ಕಾರಿ ಬಸ್ ಬಿಡಲು ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಆಗ್ರಹ…!!!

ಗೆದ್ದಲಗಟ್ಟೆ ಗ್ರಾಮಕ್ಕೆ ಸರ್ಕಾರಿ ಬಸ್ ಬಿಡಲು ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಆಗ್ರಹ!!!!!! ವಿಜಯನಗರ ಜಿಲ್ಲೆ:- ಕೂಡ್ಲಿಗಿ ತಾಲೂಕು ಜರ್ಮಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಯಾದ ಗೆದ್ದಲಗಟ್ಟೆ ಗ್ರಾಮಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಬಿಡಲು ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಆಗ್ರಹಿಸಿದ್ದಾರೆ.

ಸುಮಾರು 400 ಕ್ಕೂ ಹೆಚ್ಚು ಮನೆಗಳು ಇರುವ ಒಂದು ಪುಟ್ಟ ಹಳ್ಳಿ ಸುಂದರ ಅರಣ್ಯದ ಪರಿಸರ ಮಧ್ಯೆ ಇರುವ ಗೆದ್ದಲಗಟ್ಟೆ ಗ್ರಾಮದಲ್ಲಿ ಸರಿಸುಮಾರು 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಹೈಸ್ಕೂಲ್ ಶಿಕ್ಷಣವನ್ನು ಪಡೆಯುವುದಕ್ಕೆ ಮೂರು ಕಿಲೋ ಮೀಟರ್ ದೂರದಲ್ಲಿರುವ ನರಸಿಂಹನಗಿರಿ ಗ್ರಾಮಕ್ಕೆ ಪ್ರತಿ ದಿನ ನಡೆದುಕೊಂಡೆ ಹೋಗುವ ಅನಿವಾರ್ಯತೆ ಇದೆ ಎಂದು ತಿಳಿಸಿದರು. ನಂತರ ವಿದ್ಯಾರ್ಥಿಗಳು ಮಾತನಾಡಿ ಸಂಬಂಧಪಟ್ಟ ಕೂಡ್ಲಿಗಿ ತಾಲೂಕು ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು ಮತ್ತು ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ಅವರಿಗೆ ನಮ್ಮ ಗ್ರಾಮಕ್ಕೆ ಒಂದು ಬಸ್ಸಿನ ಸೌಲಭ್ಯ ಒದಗಿಸಿಕೊಡಲು ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಒತ್ತಾಯಿಸಿದ್ದಾರೆ…

ವರದಿ. ಬಸಪ್ಪ ಬಣವಿಕಲ್ಲು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend