;

ಧ್ರುವ ದೇಶ ಕಂಪನಿಯ ಹೆಚ್ಚುವರಿ ಘಟಕ ಸ್ಥಾಪನೆಗೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ವಿರೋಧ…!!!

ಧ್ರುವ ದೇಶ ಕಂಪನಿಯ ಹೆಚ್ಚುವರಿ ಘಟಕ ಸ್ಥಾಪನೆಗೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ವಿರೋಧ

ಹಿರೇಮಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬಗನಾಳ ಸಮೀಪದ ಧೃವ ದೇಶ ಮೆಟಾ ಸ್ಟೀಲ್ ಪ್ರವೇಟ್ ಲಿಮಿಟೆಡ್ ಕಾರ್ಖಾನೆಗೆ ಹೆಚ್ಚುವರಿ ಘಟಕ ಸ್ಥಾಪನೆಗೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರಿಂದ ವ್ಯಾಪಕವಾಗಿ ವಿರೋಧವಾಗಿದ್ದು ಯಾವುದೇ ಕಾರಣಕ್ಕೂ ಜಿಲ್ಲಾ ಅಧಿಕಾರಿಗಳು ಅನುಮತಿ ನೀಡಬಾರದು ಎಂದು ವ್ಯಕ್ತವಾಯಿತು ಗ್ರಾಮದ ಕರಿಯಮ್ಮ ದೇವಸ್ಥಾನದ ಆವರಣದಲ್ಲಿ ಶನಿವಾರದಂದು ಗ್ರಾಮ ಪಂಚಾಯಿತಿಯಿಂದ ನಡೆದ ಗ್ರಾಮ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಾಪನೆಗೊಂಡಿರುವ ಕಾರ್ಖಾನೆಗಳಿಂದ ವಾಯು ಹಾಗೂ ಜಲ ಮಾಲಿನ್ಯ ಆಗುತ್ತಿದೆ ಸಾಕಷ್ಟು ಬಾರಿ ಜಿಲ್ಲಾ ಆಡಳಿತಕ್ಕೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಗಮನಕ್ಕೆ ತಂದು ಯಾವುದೇ ಪ್ರಯೋಜನವಾಗುತ್ತಿಲ್ಲ ಸದರಿ ಕಾರ್ಖಾನೆಯಿಂದ ಹೊರ ಸೂಸುವ ಕಪ್ಪು ಮಿಶ್ರಿತ ವಿಷಪೂರಿತ ಬೂದಿ ಹಾಗೂ ದುರ್ವಾಸನೆಯಿಂದ ರೈತರುಗಳಿಗೆ ಚಿಕ್ಕ ಮಕ್ಕಳಿಗೆ ಗ್ರಾಮಸ್ಥರಿಗೆ ಜಾನುವಾರುಗಳಿಗೆ ಜಲಚರಗಳಿಗೆ ವಯಸ್ಸಾದವರಿಗೆ ತೀವ್ರತರವಾದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಕಾರ್ಖಾನೆಗಳ ಕಲುಷಿತ ತ್ಯಾಜ್ಯ ಕಲಬೆರಿಕೆಯೊಂದಿಗೆ ತುಂಗಭದ್ರ ನದಿಗೆ ಸೇರುತ್ತದೆ ಕಲುಷಿತ ನೀರು ಸೇವಿಸುವುದರಿಂದ ರೈತರಿಗೆ ಹಾಗೂ ಜಾನುವಾರುಗಳಿಗೆ ನಾನಾ ರೀತಿಯ ಕಾಯಿಲೆಗಳು ಬರುತ್ತವೆ ಹೀಗಾಗಿ ಹಿರೇಬಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಕಾರ್ಖಾನೆಗಳ ಸ್ಥಾಪನೆಗೆ ಅನುಮತಿ ನೀಡಬಾರದೆಂದು ಗ್ರಾಮ ಪಂಚಾಯಿತಿ ಪಿಡಿಒ ಗಮನಕ್ಕೆ ತಂದರು ಸಭೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಸರ್ವ ಸದಸ್ಯರು ಯುವಕರು ಪಾಲ್ಗೊಂಡು ಅನಿಸಿಕೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು..

ವರದಿ. ಸಂಗೀತ ಪಾಟೀಲ್, ಕೊಪ್ಪಳ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;