ಸರ್ಕಾರ ಯೋಜನೆಗಳು ಸಭೆಯುಪಯೋಗ ಪಡೆದುಕೊಳ್ಳು ಬೇಕೆಂದು ಗಂಗಾವತಿ ಶಾಸಕ ಜನಾರ್ದನ್ ರೆಡ್ಡಿ ಸಲಹೆ ನೀಡಿದರು…!!!

ಸರ್ಕಾರ ಯೋಜನೆಗಳು ಸಭೆಯುಪಯೋಗ ಪಡೆದುಕೊಳ್ಳು ಬೇಕೆಂದು ಗಂಗಾವತಿ ಶಾಸಕ ಜನಾರ್ದನ್ ರೆಡ್ಡಿ ಸಲಹೆ ನೀಡಿದರು.
ಕೊಪ್ಪಳ ಜಿಲ್ಲಾ ಗಂಗಾವತಿ ತಾಲೂಕಿನ ಎಲ್ಲಾ ಕುಟುಂಬದ ಯಜಮಾನಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಿಂದ ಬರುವ ಹಣವನ್ನು ದುರುಪಯೋಗಪಡಿಸಿ ಕೊಳ್ಳದಂತೆ ತಮ್ಮ ಮಕ್ಕಳಿಗೆ ಹಾಗೂ ಕುಟುಂಬ ನಿರ್ವಹಣೆಗೆ ಉಪಯೋಗಿಸಿಕೊಳ್ಳಬೇಕೆಂದು ಗಂಗಾವತಿ ಶಾಸಕ ಜನಾರ್ದನ್ ರೆಡ್ಡಿ ಸಲಹೆ ನೀಡಿದರು. ಗಂಗಾವತಿ ತಾಲೂಕಿನ ವಡ್ಡರಟ್ಟಿ ಕ್ಯಾಂಪಿನ ಜಿಲ್ಲಾ ಕೃಷಿ ಕೇಂದ್ರ ಸವಾಂಗಣದಲ್ಲಿ ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತ ಶಿಶು ಮತ್ತು ಅಭಿವೃದ್ಧಿ ಇಲಾಖೆ ಹಾಗೂ ತಾಲೂಕ ಪಂಚಾಯತಿ ಗ್ರಾಮ ಪಂಚಾಯತಿ ವತಿಯಿಂದ ಬುಧವಾರ ಆಯೋಜಿಸಿದ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಮನೆಯ ಯಜಮಾನಿಗೆ 2000 ಹಣಬರುತ್ತದೆ. ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಮಹಿಳೆಯರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಜೊತೆಗೆ ಒಳ್ಳೆಯ ಸಂಸ್ಕಾರ ನೀಡಬೇಕು ಮಾನ್ಯ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರು ಒಳ್ಳೆಯ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು. ಇದೆಸಂದರ್ಭದಲ್ಲಿ ವಡ್ಡರಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಜುಳಾ ಅತ್ತಿ ಮರ ಅವರು ಮಾತನಾಡಿ ಮಹಿಳೆಯರು ಆರ್ಥಿಕವಾಗಿ ಬಲವರ್ಧನೆ ಆಗಲು ಗೃಹಲಕ್ಷ್ಮಿ ಯೋಜನೆ ಬುನಾದಿ ಆಗಲಿದೆ. ಎಲ್ಲಾ ಮಹಿಳೆಯರು ಈ ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು. ಜಿಲ್ಲಾ ಕೃಷಿತರಬೇತಿ ಕೇಂದ್ರದ ಸಭಾಂಗಣದಲ್ಲಿ ಆಯೋಗಿಸಿದ ಗೃಹಲಕ್ಷ್ಮಿ ಯೋಜನೆ ನೇರ ಪ್ರಸಾರ ಕಾರ್ಯಕ್ರಮವನ್ನು ಶಾಸಕರು ಹಾಗೂ ಅಧಿಕಾರಿಗಳು ಫಲಾನುಭವಿಗಳು ವೀಕ್ಷಣೆ ಮಾಡಿದರು.
ಈ ಕಾರ್ಯಕ್ರಮವು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಜುಳ ಅತ್ತಿ ಮರದರು ಕಾರ್ಯಕ್ರಮದ ಅಧ್ಯಕ್ಷ ವಹಿಸಿದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಗೌಸಸಾಬ್ ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ತಾಳಕೇರಿ ತೊದಲಬಾಗಿ ತಹಸೀಲ್ದಾರರಾದ ಮಂಜುನಾಥ್ ಭೂಗಾವತಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಹಾಗೂ ನೋಡಲ್ ಅಧಿಕಾರಿಗಳು ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾಧಿಕಾರಿಗಳಾದ ಸುರೇಶ್ ಕೋರೆ ಶಿಶು ಅಭಿವೃದ್ಧಿ ಅಧಿಕಾರಿಗಳಾದ ರೋಹಿಣಿ ಕೋಟಗಾರ ತಾಲೂಕ್ ಪಂಚಾಯತಿ ಸಹಾಯಕ ನಿರ್ದೇಶಕರಾದ ಮಹಂತಗೌಡ ಪಾಟೀಲ್ ಹಾಗೂ ಗ್ರಾಮ ಪಂಚಾಯತಿಯ ಪಿಡಿಒ ಕಾಶಿನಾಥ್ ಹಂಚಿನಾಳ ಹಾಗೂ ಸರ್ವ ಸದಸ್ಯರು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಇದ್ದರು. ಸ ಹಿ ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಕೆ ನಿರೂಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತರು ಹಾಗೂ ಇನ್ನಿತರರು ಭಾಗವಹಿಸಿದರು..

ವರದಿ, ಹೆಚ್ ಮಲ್ಲೇಶ್ವರ ಭಂಡಾರಿ ಗಂಗಾವತಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend