ನೀರು ಶುದ್ಧೀಕರಣ ಘಟಕಕ್ಕೆ ಸಚಿವ ಬಿ.ನಾಗೇಂದ್ರ ಭೇಟಿ: ಪರಿಶೀಲನೆ…!!!

ನೀರು ಶುದ್ಧೀಕರಣ ಘಟಕಕ್ಕೆ ಸಚಿವ ಬಿ.ನಾಗೇಂದ್ರ ಭೇಟಿ: ಪರಿಶೀಲನೆ
ಬಳ್ಳಾರಿ:
ತಾಲೂಕಿನ ಸಂಗನಕಲ್ಲು ಸಮೀಪದ ಕುಡಿಯುವ ನೀರಿನ ಶುದ್ಧೀಕರಣ ಘಟಕಕ್ಕೆ ಯುವಜನ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಅವರು, ನಗರಕ್ಕೆ ಸ್ವಚ್ಛ ಕುಡಿಯುವ ನೀರು ಪೂರೈಸಬೇಕು. ನೀರು ಪೂರೈಸುವ ಮೊದಲು ನೀರಿನ ಸಂಗ್ರಾಹಾಗಾರಗಳನ್ನು ಪರಿಶೀಲಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು.

ನಿಯಮಿತವಾಗಿ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ಸಂಗ್ರಹಿತ ನೀರನ್ನು ಪರೀಕ್ಷಿಸಿ ಪರಿಶೀಲಿಸಿ ಕುಡಿಯಲು ಬಳಸಲು ಯೋಗ್ಯವಾಗಿದೆ ಎಂದು ತಿಳಿದುಕೊಂಡು ನೀರು ಪೂರೈಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ನಗರಕ್ಕೆ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಇನ್ನಿತರೆ ಸೌಲಭ್ಯಗಳು ಬೇಕಾದಲ್ಲಿ ಗಮನಕ್ಕೆ ತಂದರೆ, ಅಗತ್ಯ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ , ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಸೇರಿದಂತೆ ನಗರ ನೀರು ಸರಬರಾಜು ಮಂಡಳಿ ಕಾರ್ಯಪಾಲಕ ಅಭಿಯಂತರರು ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು…

ವರದಿ. ವಿರೇಶ್. ಎಚ್. ಬಳ್ಳಾರಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend