;

ರಾಮಸಾಗರ ಹಟ್ಟಿ ಪ್ರೌಢಶಾಲೆಯ ವಿಜ್ಞಾನ ವಿಷಯದ ಶಿಕ್ಷಕರಿಗೆ ತಾಲೂಕು ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ;…!!!

ರಾಮಸಾಗರ ಹಟ್ಟಿ ಪ್ರೌಢಶಾಲೆಯ ವಿಜ್ಞಾನ ವಿಷಯದ ಶಿಕ್ಷಕರಿಗೆ ತಾಲೂಕು ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ;…. ಕೂಡ್ಲಿಗಿ:- ತಾಲೂಕಿನ ರಾಮಸಾಗರ ಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ವಿಷಯದ ಶಿಕ್ಷಕರಾದ ಸುದರ್ಶನ್ ಅವರಿಗೆ 2023-24 ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಇವರಿಗೆ ಸೆಪ್ಟೆಂಬರ್ 5 ರಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕು ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಜನಪ್ರಿಯ ಶಾಸಕರಾದ ಡಾ.ಶ್ರೀನಿವಾಸ್ ಎನ್ ಟಿ ರವರು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ರಾಮಸಾಗರ ಹಟ್ಟಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಮಾರು ಹತ್ತು ವರ್ಷಗಳ ಕಾಲ ವಿಜ್ಞಾನ ವಿಷಯದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಜ್ಞಾನ ವಿಷಯದಲ್ಲಿ ಇನ್ಸ್ ಷರ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಸತತವಾಗಿ ಮೂರು ಬಾರಿ ರಾಜ್ಯಮಟ್ಟಕ್ಕೆ ಈ ಶಾಲೆ ಆಯ್ಕೆ ಆಗಿರುತ್ತದೆ ಇವೆಲ್ಲವನ್ನೂ ಗಮನಿಸಿ ಇಂದು ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ , ಎಸ್ ಡಿ ಎಂ ಸಿ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್ ಮಾತನಾಡಿ ನಮ್ಮ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾದ ಸುದರ್ಶನ್ ಸರ್ ಅವರಿಗೆ ತಾಲೂಕು ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವುದು ನಮ್ಮೇಲ್ಲರಿಗೆ ಸಂತಸವಾಗಿದೆ ನಮ್ಮ ಗ್ರಾಮದ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿದ್ದಾರೆ ಇವರ ಈ ಒಂದು ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ ಎಂದು ಭಾವಿಸಿದ್ದೇನೆ.ಶಾಲೆಯಲ್ಲಿ ಪ್ರತಿಯೊಬ್ಬ ಶಿಕ್ಷಕರು ಮಕ್ಕಳಿಗೆ ಚೆನ್ನಾಗಿ ಬೋಧನೆ ಮಾಡುತ್ತಿದ್ದಾರೆ ಇಂತಹ ಶಿಕ್ಷಕರನ್ನು ಪಡೆದ ಗ್ರಾಮದ ಮಕ್ಕಳೆ ಪುಣ್ಯವಂತರು ಎಂದು ಹರ್ಷ ವ್ಯಕ್ತಪಡಿಸಿದರು. ಮುಖ್ಯ ಶಿಕ್ಷಕ ವೈ ಎಂ ಈಶಪ್ಪ , ಸಹ ಶಿಕ್ಷಕರಾದ ನಿಜಗುಣಪ್ಪ ಸಿದ್ದೇಶ್ , ರಾಘವೇಂದ್ರ , ಮಾರೇಶ್ , ಭೈರವ ಶೆಟ್ಟಿ , ಶ್ರೀಮತಿ ರುಕ್ಮಿಣಿ ಬಾಯಿ , ಸಿದ್ದಯ್ಯ ಸ್ವಾಮಿ , ಬಸವರಾಜ್ , ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರು ಸದಸ್ಯರು ಮತ್ತು ಮಕ್ಕಳು ಇದ್ದರು…

ವರದಿ. ಬಸಪ್ಪ ಬಣವಿಕಲ್ಲು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;