ಡಿ ವೈ ಎಸ್ ಪೀ ರಾಜಣ್ಣ ನವರಿಂದ ರೌಡಿಶೀಟರ್ ಗಳಿಗೆ ಕಡಕ್ ಎಚ್ಚರಿಕೆ…!!!

ಡಿ ವೈ ಎಸ್ ಪೀ ರಾಜಣ್ಣ ನವರಿಂದ ರೌಡಿಶೀಟರ್ ಗಳಿಗೆ ಕಡಕ್ ಎಚ್ಚರಿಕೆ. ಚಳ್ಳಕೆರೆ ನಗರದ ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಅಪರಾಧ ಮಾಡಿ ರೌಡಿಶೀಟರ್ ಹಣೆ ಪಟ್ಟಿಕಟ್ಟಿಕೊಂಡಿದ್ದೀರಿ. ಇನ್ನಾದರೂ ಸಮಾಜ ಘಾತುಕ ಕೃತ್ಯದಲ್ಲಿ ತೊಡಗದೆ ನಿಮ್ಮ ಜೀವನವನ್ನು ಒಳ್ಳೆಯ ರೀತಿಯಲ್ಲಿ ಸಾಗಿಸುವಂತೆ ಡಿವೈಸ್ಪಿ ರಾಜಣ್ಣ ಎಚ್ಚರಿಕೆ ನೀಡಿದರು. ನಗರದ ಪೋಲಿಸ್ ಠಾಣೆ ಆವರಣದಲ್ಲಿ ಪೋಲಿಸ್ ಇಲಾಖೆವತಿಯಿಂದ ರೌಡಿಶೀಟರ್ ಗಳಿಗೆ ಆಯೋಜಿಸಿದ್ದ ಪೆರೆಡ್ ನಲ್ಲಿ ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ನಗರ ಹಾಗೂ ಗ್ರಾಮೀಣ ಭಾಹದಲ್ಲಿ ಗಣೇಶೋತ್ಸವ ಕಾರ್ಯಕ್ರಮಗಳು ಜರುಗಲಿದ್ದು ಕಾನೂನು ಸುವ್ಯವಸ್ಥೆಗೆ ಬಂಗ ತಂದರೆ ಅಂತವರ ವಿರುದ್ದು ಮತ್ತೆ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಸಾಮಾಜದಲ್ಲಿ ಉತ್ತಮ ಪ್ರಜೆಯಾಗಿ ಜೀವನ ನಡೆಸ ಬೇಕು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಚಳ್ಳಕೆರೆ ತಾಲೂಕು ಶಾಂತಿಯುತವಾಗಿದೆ ಎಲ್ಲಾ ಜಾತಿ ಜನಾಂಗ ಧರ್ಮದ ಜನರು ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ ಹಬ್ಬ ಹರಿದಿನಗಳು ಸಮೀಪಿಸುತ್ತಿರುವುದರಿಂದ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಕರ್ತವ್ಯವಾಗಿದೆ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ನಿಮ್ಮ ಮೇಲೆ ಹದ್ದಿನ ಕಣ್ಣು ಇಟ್ಟಿರುತ್ತದೆ ಯಾವುದೇ ಕಾರಣಕ್ಕೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಡಬೇಕು. ಒಂದು ವೇಳೆ ಅಂತಹ ಪ್ರಕರಣಗಳು ಕಂಡು ಬಂದಲ್ಲಿ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಿ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಠಾಣೆ ಪಿ ಐ. ಆರ್ ಎಫ್ ದೇಸಾಯಿ . ಪಿಎಸ್ಐ ಗಳು ಉಪಸ್ಥಿತರಿದ್ದರು…

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend