ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ “ನಿಡಗುಂದಿ ಗ್ರಾಮದ ಸಿದ್ದೇಶ್ವರ ನಗರ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣ ಮಾಡುವುದು” ಎಂಬ ಕಾಮಗಾರಿ ಹೆಸರಿನಲ್ಲಿ ಕಳೆದ 6 ವರುಷಗಳ ಹಿಂದೆ 11 ಲಕ್ಷ 60 ಸಾವಿರ ರೂಪಾಯಿ ಮಂಜೂರಾಗಿ ಆ ಕಾಮಗಾರಿಯ ಬಿಲ್ಲಿನ ಹಣ ಕೂಡ ಗುತ್ತಿಗೆದಾರನಿಗೆ ಸಂದಾಯವಾದರು ಸಹ ಕಟ್ಟಡವನ್ನು ಪೂರ್ಣಗೊಳಿಸದೇ ಅರ್ಧಕ್ಕೆ ನಿಲ್ಲಿಸಿದ್ದಾರೆ. ಇದಕ್ಕೇ ಸಂಭಂದ ಪಟ್ಟ ಜಿಲ್ಲಾ, ತಾಲೂಕ, ಗ್ರಾಮ ಪಂಚಾಯತ ಅಧಿಕಾರಿಗಳು ತಕ್ಷಣ ತಪ್ಪಿಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಗುತ್ತಿಗೆದಾರನ ಲೈಸೆನ್ಸ್ ಕಪ್ಪು ಪಟ್ಟಿಗೆ ಸೇರಿಸಬೇಕು ಮತ್ತು ಆಗ ಕಾರ್ಯ ನಿರ್ವಹಿಸುತ್ತಿದ್ದು ಪಿಡಿಒ ನನ್ನು ಸರಕಾರಿ ಸೇವೆಯಿಂದ ವಜಾಗೊಳಿಸಬೇಕೆಂದು ಸ್ಥಳೀಯ ಗ್ರಾಮಸ್ಥರು ಆಗ್ರಹಿಸಿದ್ದಾರೆ…

ವರದಿ. ಮಹಾಲಿಂಗ ಗಗ್ಗರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
