;

ಮೊಳಕಾಲ್ಮುರು :-ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ…!!!

ಬಾಲ್ಯ ವಿವಾಹ ಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿ ಡಿ ಪಿ ಓ ನವೀನ್ ಹೇಳಿದರು. ಮೊಳಕಾಲ್ಮುರು ತಾಲೂಕಿನ ಕೋನಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ ನಿಷೇದ ಮತ್ತು ಪೋಕ್ಸೋ ಕಾಯ್ದೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಾಲ್ಯ ವಿವಾಹ ಸಮಾಜಕ್ಕೆ ಅಂಟಿಕೊಂಡ ದೊಡ್ಡ ಪಿಡುಗು ಇದರ ಕುರಿತಾಗಿ ಇಲಾಖೆಯು ಅನೇಕ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುತ್ತಿದ್ದೂ ಸ್ಥಳೀಯ ಶಾಲೆಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಸ್ಥರು ಬಾಲ್ಯ ವಿವಾಹ ನಿಷೇದಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನೆರ್ಲಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ ಮಲಿಕ್ ಮಾತನಾಡಿ ಬಾಲ್ಯ ವಿವಾಹದ ಮಾಹಿತಿ ಸಿಕ್ಕಾಗ ಮಕ್ಕಳ ಸಹಾಯ ವಾಣಿ 1098 ಕ್ಕೆ ಕರೆಮಾಡಿ ಮಾಹಿತಿ ನೀಡಬಹುದು, ಮಾಹಿತಿ ನೀಡಿದವರ ವಿವರವನ್ನು ಗೌಪ್ಯಾವಾಗಿ ಇಡಲಾಗುತ್ತಿದೆ ಎಂದರು.


ಈ ಕಾರ್ಯಕ್ರಮದಲ್ಲಿ ಕೋನಾಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರೇಣುಕಮ್ಮ, ಸದಸ್ಯರಾದ ನಾಗೇಂದ್ರಪ್ಪ, ಪಾಲಯ್ಯ, ಪಿಡಿಓ ಯಶವಂತ್, ಮುಖ್ಯ ಶಿಕ್ಷಕ ಇಸ್ಮಾಯಿಲ್, ಶ್ರೀನಿವಾಸ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ನೆರ್ಲಹಳ್ಳಿ, ಕೋನಸಾಗರ ಶಾಲೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;