;

ಸ್ಮಾರ್ಟ್ ಮೀಟರ್ ಅಳವಡಿಕೆಗೆ ವಿರೋಧ ಚಿತ್ರದುರ್ಗದಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ…!!!

ವರದಿ. ಪಾಲದೀಪ್ ಯಾದವ್

ಸ್ಮಾರ್ಟ್ ಮೀಟರ್ ಅಳವಡಿಕೆಗೆ ವಿರೋಧ ಚಿತ್ರದುರ್ಗದಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ……

ಚಿತ್ರದುರ್ಗ:ರೈತ ಸಂಘಗಳ ಸಮನ್ವಯ ಮತ್ತು ಅನುಷ್ಠಾನ ಸಮಿತಿ ವತಿಯಿಂದ. ವಿವಿಧ ಬೇಡಿಕೆ ಈಡೇರಿಸುವಂತೆ ಹಾಗೂ ಸ್ಮಾರ್ಟ್ ಮೀಟರ್ ಅಳವಡಿಕೆ ವಿರೋಧಿಸಿ, ಎ.ಪಿ.ಎಂ.ಸಿ. ಯಿಂದ ಒನಕೆ ಓಬವ್ವ ವೃತ್ತದವರೆಗೆ ಬೃಹತ್ ಪ್ರತಿಭಟನೆ ನೆಡೆಸಲಾಯಿತು. ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ, ನೆರೆಯ ರಾಜ್ಯಗಳಾದ ಕೇರಳ ಮತ್ತು ಆಂಧ್ರಗಳಲ್ಲಿ ಕೇವಲ 900 ರೂ.ಗಳಿಗೆ ಸ್ಮಾರ್ಟ್ ಸಿಗುತ್ತದೆ. ಅದೇ ನಮ್ಮ ರಾಜ್ಯದಲ್ಲಿ ಹತ್ತು ಸಾವಿರ ರೂ.ಗಳಿಗೆ ಸ್ಮಾರ್ಟ್ ಮೀಟ‌ರ್ ಅಳವಡಿಸಲು ಹೊರಟಿರುವುದು ಯಾವ ಪುರುಷಾರ್ಥಕ್ಕಾಗಿ, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಜನರ ತೆರಿಗೆ ಹಣದಲ್ಲಿ ದುಬಾರಿ ಸ್ಮಾರ್ಟ್ ಮೀಟರ್ ಖರೀಧಿಸುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಭೂತಯ್ಯ, ರಾಜ್ಯ ಹಿರಿಯ ಉಪಾಧ್ಯಕ್ಷರು ರೆಡ್ಡಿ ಹಳ್ಳಿ ವೀರಣ್ಣ, ರಾಜ್ಯ ಉಪಾಧ್ಯಕ್ಷರು ಕೆ. ಟಿ. ತಿಪ್ಪೇಸ್ವಾಮಿ, ಜಿಲ್ಲಾ ಅಧ್ಯಕ್ಷರು ಕನ್ನಗೊಂದಿ ಗಂಗಾಧರ್, ಜಿಲ್ಲಾ ಸಂಚಾಲಕರು ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಸಮಿತಿ ಮುಖಂಡರು ತಾಲೂಕ್ ಸಮಿತಿ ಮುಖಂಡರು ರೈತರು ಮತ್ತು ರೈತ ಕಾರ್ಯಕರ್ತರು ರೈತ ಮಹಿಳೆಯರು ಉಪಸ್ಥಿತರಿದ್ದರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;