ಇಂದು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ, ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ , ಹಾಗೂ ಪ್ರಚಾರದ ಉದ್ದೇಶದಿಂದ ಅವರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಇಂದು ಮೆದೆಹಳ್ಳಿ ಗ್ರಾಮ ಪಂಚಾಯಿತಿ, ಒನಕೆ ಓಬವ್ವ ಸಂಜೀವಿನಿ ಒಕ್ಕೂಟದ ಸಹಕಾರದೊಂದಿಗೆ ಮದೆಹಳ್ಳಿ ರಸ್ತೆ ಬ್ರಿಡ್ಜ್ ಹತ್ತಿರ ಮಾಸಿಕ ಸಂತೆಯನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಚಿತ್ರದುರ್ಗ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರವಿಕುಮಾರ್ N ಗ್ರಾಮ ಪಂಚಾಯಿತಿ ಮೆದೆಹಳ್ಳಿ ಅಧ್ಯಕ್ಷರಾದ ಶ್ರೀಮತಿ ಕಾವ್ಯ ವಿಜಯ್ ಕುಮಾರ್ ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು ಹಾಗೂ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಸುನೀತಾ ಅವರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು, ಹಾಗೂ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು, ತಾಲೂಕು ವ್ಯವಸ್ಥಾಪಕರು, ಹಾಗೂ ಒಕ್ಕೂಟದ CRP ಗಳು, ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು…

ವಿನಾಯಕ ಆರ್ ಜಿ
ವರದಿಗಾರರು ಚಿತ್ರದುರ್ಗ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
