;

ರಾಜ್ಯ ಮಹಿಳಾ ಘಟಕಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಾಗವೇಣಿ ಎಸ್ ಪಾಟೀಲ್ ನೇಮಕ…!!!

ರಾಜ್ಯ ಮಹಿಳಾ ಘಟಕಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಾಗವೇಣಿ ಎಸ್ ಪಾಟೀಲ್ ನೇಮಕ

ರಾಯಚೂರು: ಜಿಲ್ಲೆಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ
ನಾಗವೇಣಿ ಎಸ್ ಪಾಟೀಲ್ ಅವರಿಗೆ ಮಹಿಳಾ ಕಾಂಗ್ರೆಸ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ಒಲಿದು ಬಂದಿದೆ. ಪಕ್ಷಕ್ಕಾಗಿ ಅವರು ಸಲ್ಲಿಸಿದ ಸೇವೆ ಪರಿಗಣಿಸಿ ಉನ್ನತ ಹುದ್ದೆ ನೀಡಲಾಗಿದ್ದು, ಪಕ್ಷಸಂಘಟನೆಯಲ್ಲಿ ಸಕ್ರಿಯವಾಗುವಂತೆ ರಾಜ್ಯ ಮಹಿಳಾ ಘಟಕ ಸೂಚನೆ ನೀಡಿದೆ. ಕೋವಿಡ್ ಸಂದರ್ಭದಲ್ಲಿ ಜನರಿಗೆ ಕಲ್ಪಿಸಿದ ನೆರವು,ಹಲವಾರು ಸಾಮಾಜಿಕ ಸೇವೆಯ ಕಾರ್ಯಗಳು ಮತ್ತು ಕಾಂಗ್ರೆಸ್ ಪರ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಅವರ ಸೇವೆ ಗುರುತಿಸಿ ಪಕ್ಷದಲ್ಲಿ ರಾಜ್ಯ ಮಟ್ಟದ ಸ್ಥಾನ ಕಲ್ಪಿಸಲಾ ಗಿದೆ. ಅವರು ಪಕ್ಷ ಸಂಘಟಿಸಿ, ಮಹಿಳೆಯರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಸೌಲಭ್ಯಗಳ ಮನವರಿಕೆ ಮಾಡಬೇಕು ಎಂದು ರಾಜ್ಯ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ತಿಳಿಸಿದ್ದಾರೆ.ನಂತರ ಮಾತನಾಡಿದ ನಾಗವೇಣಿ ಎಸ್ ಪಾಟೀಲ್ ಅವರು ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯ ಆಯ್ಕೆಗೆ ಕಾರಣಿಭೂತರಾದ ರಾಜ್ಯ ಹಾಗೂ ರಾಯಚೂರು ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಹಿರಿಯ ನಾಯಕರಿಗೆ ಕಾರ್ಯಕರ್ತರಿಗೆ ಹೃತ್ಪೂರ್ವಕವಾಗಿ ಅಭಿನಂದನೆಗಳು ತಿಳಿಸಿದರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;