ಮಕ್ಕಳಿಗೆ ಕೌಟುಂಬಿಕ ಬಾಂಧವ್ಯದ ಮಹತ್ವವನ್ನು ತಿಳಿಸುವ
ಉದ್ದೇಶದಿಂದ ಶಾಲೆಯಲ್ಲಿ “ಫ್ಯಾಮಿಲಿಡೇ”ಕಾರ್ಯಕ್ರಮವನ್ನು
ಹಮ್ಮಿಕೊಂಡಿದೆ :ಕಾರ್ಯದರ್ಶಿಆಲೂರುಹನುಮಂತರಾಯಪ್ಪ
ಹಿರಿಯೂರು :
ಇಂದಿನ ಆಧುನಿಕ ಜಗತ್ತಿನಲ್ಲಿ ಕೌಟುಂಬಿಕ ಬಾಂಧವ್ಯಗಳು ಕಣ್ಮರೆಯಾಗುತ್ತಿದ್ದು, ತಂದೆ-ತಾಯಿ, ಅಜ್ಜಿ-ತಾತ, ಇವರುಗಳೊಂದಿಗೆ ಸ್ನೇಹಮಯ ಸಂಬಂಧಗಳು ಕ್ಷೀಣಿಸುತ್ತಿವೆ, ಇಂತಹ ಕೌಟುಂಬಿಕ ಬಾಂಧವ್ಯಗಳ ಮಹತ್ವವನ್ನು ಮಕ್ಕಳಿಗೆ ಬಾಲ್ಯದಲ್ಲಿಯೇ ತಿಳಿಸುವ ಉದ್ದೇಶದಿಂದ ನಮ್ಮ ಶಾಲೆಯಲ್ಲಿ “ಫ್ಯಾಮಿಲಿ ಡೇ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರುಹನುಮಂತರಾಯಪ್ಪ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ವಿದ್ಯಾಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಫ್ಯಾಮಿಲಿ ಡೇ” ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ, ನಂತರ ಅವರು ಮಾತನಾಡಿದರು.
“ಬೆಳೆಯುವ ಸಿರಿ ಮೊಳಕೆಯಲ್ಲಿಯೇ” ಎನ್ನುವಂತೆ ಮಕ್ಕಳಿಗೆ ಬಾಲ್ಯದಲ್ಲಿಯೇ ಕುಟುಂಬದಲ್ಲಿರುವ ತಂದೆ-ತಾಯಿ, ಅಜ್ಜಿ-ತಾತ, ಸಹೋದರರ ಅಗತ್ಯತೆಯನ್ನು ತಿಳಿಸುವ ಜೊತೆಗೆ ಮಕ್ಕಳ ಲಾಲನೆ-ಪಾಲನೆಗಾಗಿ ತಂದೆ-ತಾಯಿಗಳು ಪಡುತ್ತಿರುವ ಕಷ್ಟ ಹಾಗೂ ಅವರ ತ್ಯಾಗವನ್ನು ಮಕ್ಕಳು ತಿಳಿದಾಗ ಮಾತ್ರ ಮಕ್ಕಳಿಗೆ ಕುಟುಂಬದ ಸದಸ್ಯರ ಬಗ್ಗೆ ಪ್ರೀತಿ ಗೌರವ ಹೆಚ್ಚಾಗುತ್ತದೆ ಎಂಬುದಾಗಿ ಹೇಳಿದರು.
ಶಾಲೆಯಲ್ಲಿ “ಫ್ಯಾಮಿಲಿ ಡೇ”ಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳನ್ನು ಕುಟುಂಬಕ್ಕೆ ಹತ್ತಿರವಾಗುವಂತೆ ಮಾಡುತ್ತವೆಯಲ್ಲದೆ, ತಂದೆ-ತಾಯಿಗಳು ತಮ್ಮ ಅಮೂಲ್ಯ ಸಮಯವನ್ನು ಮಕ್ಕಳೊಂದಿಗೆ ಸಂತೋಷ-ಸಂಭ್ರಮದಿಂದ ಕಳೆಯಲು ಒಂದು ಉತ್ತಮ ವೇದಿಕೆಯನ್ನು ಕಲ್ಪಿಸಿಕೊಟ್ಟಂತಾಗುತ್ತದೆ ಎಂಬುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಮಕ್ಕಳ ಪೋಷಕರಿಗೆ ವಿವಿಧ ಆಟಗಳನ್ನು ಆಡಿಸಲಾಯಿತು. ಆಟದಲ್ಲಿ ವಿಜೇತರಾದ ಪೋಷಕರಿಗೆ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪೋಷಕರು ತಮ್ಮ ಮಕ್ಕಳೊಂದಿಗೆ ಹಾಡಿಗೆ ನೃತ್ಯವನ್ನು ಮಾಡುವ ಮೂಲಕ ಸಂಭ್ರಮಿಸಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಕೋ-ಆರ್ಡಿನೇಟರ್ ಗಳಾದ ಶ್ರೀಮತಿ ನಂದಿನಿ, ಶ್ರೀಮತಿ ರಚನಾ, ಶಿಕ್ಷಕಿಯರುಗಳಾದ ಶ್ರೀಮತಿ ಸಬೀಹಾ, ಶ್ರೀಮತಿ ಭಾಗ್ಯ, ಶ್ರೀಮತಿ ಜಯಸುಧಾ, ಮಮತಾ, ಶಿಕ್ಷಕರುಗಳಾದ ಉಮೇಶ್ ಯಾದವ್, ಶಿವರಾಜ್ ನಾಯಕ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
