;

ನಗರದ ಜನರಲ್ಲಿ ಸ್ವಚ್ಛತೆ ಹಾಗೂ ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸುವಉದ್ದೇಶದಿಂದ “ನಮ್ಮಚಿತ್ತ ಸ್ವಚ್ಛತೆಯತ್ತ”ಎಂಬ ಸ್ವಚ್ಛತಾ ಆಂದೋಲನ…!!!

ನಗರದ ಜನರಲ್ಲಿ ಸ್ವಚ್ಛತೆ ಹಾಗೂ ಶುಚಿತ್ವದ ಬಗ್ಗೆ ಜಾಗೃತಿ
ಮೂಡಿಸುವಉದ್ದೇಶದಿಂದ “ನಮ್ಮಚಿತ್ತ ಸ್ವಚ್ಛತೆಯತ್ತ”ಎಂಬ
ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ
ನಗರದನಗರಸಭೆ ನೂತನಅಧ್ಯಕ್ಷರಾದ ಬಾಲಕೃಷ್ಣ ಹೇಳಿಕೆ
ಹಿರಿಯೂರು :
ನಗರದ ಜನರಲ್ಲಿ ಸ್ವಚ್ಛತೆ ಹಾಗೂ ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸಬೇಕೆಂಬ ಉದ್ದೇಶದಿಂದ ನಗರಸಭೆ ವತಿಯಿಂದ ನಗರದ ವಿವಿಧ ವಾರ್ಡ್ ಗಳಲ್ಲಿ “ನಮ್ಮ ಚಿತ್ತ ಸ್ವಚ್ಛತೆಯತ್ತ” ಎಂಬ ಸ್ವಚ್ಛತಾ ಆಂದೋಲನಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ನಗರಸಭೆ ಅಧ್ಯಕ್ಷರಾದ ಬಾಲಕೃಷ್ಣ ಹೇಳಿದರು.
ನಗರದ ವ್ಯಾಪ್ತಿಯಲ್ಲಿ ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ವಿವಿಧ ವಾರ್ಡಗಳಲ್ಲಿ ಹಮ್ಮಿಕೊಳ್ಳಲಾಗಿದ್ದ “ನಮ್ಮ ಚಿತ್ತ ಸ್ವಚ್ಛತೆಯತ್ತ” ಎಂಬ ಸ್ವಚ್ಛತಾ ಆಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಗರದ ಸ್ವಚ್ಛತೆ ಹಾಗೂ ಶುಚಿತ್ವ ಕಾಪಾಡುವ ಮೂಲಕ ನಗರವನ್ನು ಸ್ವಚ್ಛ ಹಾಗೂ ಸುಂದರನಗರವನ್ನಾಗಿ ಮಾಡಿ, ನಗರದ ನಾಗರೀಕರ ಆರೋಗ್ಯ ಸುರಕ್ಷತೆಯನ್ನು ಕಾಪಾಡಲು ನಗರಸಭೆ ಮುಂದಾಗಿದ್ದು, ನಗರದ ಸಾರ್ವಜನಿಕರು ನಿಮ್ಮ ಮನೆಯ ಸುತ್ತಮುತ್ತಲು ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ನಗರಸಭೆಯೊಂದಿಗೆ ಕೈಜೋಡಿಸಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಪಟ್ಟಣ ಯೋಜನೆ ಮತ್ತು ಪೂರೋಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಎಲ್.ಜಿ.ರತ್ನಮ್ಮ, ಮತ್ತು ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ.ಡಿ.ಸಣ್ಣಪ್ಪ, ಪೌರಾಯುಕ್ತರಾದ ಎ.ವಾಸೀಂ ಮತ್ತು ಹಿರಿಯ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರುಗಳು ಮತ್ತು ದಪ್ಪೇದಾರಗಳು ಹಾಗೂ ಪೌರಕಾರ್ಮಿಕರು ಮತ್ತು 27 ನೇ ವಾರ್ಡ್ನ ಸಾರ್ವಜನಿಕರು ಹಾಗೂ ಸಂಘಸಂಸ್ಥೆಗಳ ಸದಸ್ಯರುಗಳು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend