;

ಸಮಾಜದಲ್ಲಿ ಅಂಗವಿಕಲರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲಿ…!!!

ಸಮಾಜದಲ್ಲಿ ಅಂಗವಿಕಲರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲಿ

ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾllಶ್ರೀನಿವಾಸ್ ಎನ್ ಟಿ ರವರು ದಿನಾಂಕ 15.08.2025 ರಂದು ಕೂಡ್ಲಿಗಿ ಪಟ್ಟಣದ ಶ್ರೀ ಮಹದೇವ ಮೈಲಾರ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಡಿಎಂಎಫ್ ಯೋಜನೆ ಅಡಿಯಲ್ಲಿ ಅಂಗವಿಕಲರಿಗೆ ಸ್ಕೂಟರ್ ಬೈಕ್ ವಿತರಿಸಿ ಮಾತನಾಡಿದರು.
ಸಮಾಜದಲ್ಲಿ ಅಂಗವಿಕಲರ ಬಗೆಗಿನ ತಾತ್ಸಾರದ ಮನೋಭಾವ ತೊಡೆದು ಹಾಕಲು ಮತ್ತು ಅವರಲ್ಲಿನ ಕೀಳರಿಮೆ ಹೋಗಲಾಡಿಸಿ ಸ್ವಾಭಿಮಾನದಿಂದ ಬಾಳಲು ಉತ್ತೇಜನ ನೀಡುವ ದೃಷ್ಟಿಯಿಂದ ಹಿಂದಿನ ವರ್ಷದಂತೆ ಈ ವರ್ಷವೂ ಕೂಡ ಅಂಗವಿಕಲರಿಗೆ 96 ಸ್ಕೂಟರ್ ಬೈಕ್ ವಿತರಿಸಲಾಗಿದೆ. ಇನ್ನು ಉಳಿದ ಅಂಗವಿಕಲ ಫಲಾನುಭವಿಗಳಿಗೆ ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರ ಸಹಕಾರದೊಂದಿಗೆ ಸಿಎಸ್ಆರ್ ಯೋಜನೆ ಅಡಿಯಲ್ಲಿ ವಿತರಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಫಲಾನುಭವಿಗಳು ಸಾರ್ವಜನಿಕರು ಇದ್ದರು…

ವರದಿ: ಅನಿಲ್ ಕುಮಾರ್ ಹುಲಿಕುಂಟೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;