ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿಗೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಆನೆಗೊಂದಿ ಗ್ರಾಮಕ್ಕೆ ಭೇಟಿದ ಶಾಸಕರಾದ ಜನಾರ್ಧನ ರೆಡ್ಡಿ…!!!

ಇಂದು ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿ ನನ್ನ ಗಂಗಾವತಿ ವಿಧಾನಸಭಾ ಕ್ಷೇತ್ರದ ಆನೆಗೊಂದಿ ಗ್ರಾಮಕ್ಕೆ ಭೇಟಿ ನೀಡಿ, ನವ ಬೃಂದಾವನದ ಸಮೀಪ ತುಂಗಭದ್ರಾ ನದಿಯ ದಡವನ್ನು ಭಾರತೀಯ ಪಾರಂಪರಿಕ ಹಾಗೂ ಸಾಂಸ್ಕೃತಿಕ ಶೈಲಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ವಿವರವಾಗಿ ಚರ್ಚಿಸಲಾಯಿತು.

ಗಂಗಾ ಆರತಿಯ ಮಾದರಿಯಲ್ಲಿ ತುಂಗಭದ್ರಾ ಆರತಿಯನ್ನು ಆಯೋಜಿಸಲು ವೇದಿಕೆ ನಿರ್ಮಾಣ, ಆನೆಗೊಂದಿ ಗ್ರಾಮದ ಎಲ್ಲಾ ರಸ್ತೆಗಳ ಅಭಿವೃದ್ಧಿ, ಪಾರಂಪರಿಕ ಶೈಲಿಯ ರಸ್ತೆ ದೀಪಗಳ ವ್ಯವಸ್ಥೆ, ಶೌಚಾಲಯಗಳ ನಿರ್ಮಾಣ ಸೇರಿದಂತೆ, ಗ್ರಾಮಕ್ಕೆ ಐತಿಹಾಸಿಕ ಗತವೈಭವವನ್ನು ಮರುಸ್ಥಾಪಿಸುವ ಯೋಜನೆಯನ್ನು ರೂಪಿಸಲು, ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಯೋಜನೆಯ ಕುರಿತು ಸವಿವರವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ಆಯುಕ್ತರಾದ ರಮೇಶ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿಶ್ವನಾಥ, ಪುರಾತತ್ವ ಇಲಾಖೆಯ ಉಪನಿರ್ದೇಶಕರಾದ ಶೇಜೇಶ್ವರ, ಗ್ರಾಪಂ ಅಧ್ಯಕ್ಷೆ ಹುಲಿಗೆಮ್ಮ ಹೊನ್ನಪ್ಪ ನಾಯಕ್, ಸದಸ್ಯರಾದ ಮಲ್ಲಿಕಾರ್ಜುನ ಹಿರೇಮಠ್, ರಾಜಶೇಖರ್, ವೆಂಕಟೇಶ್ ಬಾಬು, ನಗರ ಮಂಡಲ ಅಧ್ಯಕ್ಷರಾದ ಚಂದ್ರು ಹಿರೂರು, ಮುಖಂಡರಾದ ಮನೋಹರಗೌಡ ಹೆರೂರು, ಯಮನೂರು ಚೌಡ್ಕಿ, ಟಿ.ಜಿ ಬಾಬು, ಹೊನ್ನಪ್ಪ ನಾಯಕ್, ಸಾಯಿಕುಮಾರ್, ವೀರೇಶ್ ಅಂಜನಾದ್ರಿ, ಸೀನಾ ಆನೆಗೊಂದಿ ಸೇರಿದಂತೆ ಹಲವು ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend