ಈ ದಿನ ಕೂಡ್ಲಿಗಿಯಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ :
ಕೂಡ್ಲಿಗಿ : ತಾಲೂಕು ಆಡಳಿತದಿಂದ ಸ್ವಾತಂತ್ರ ಹೋರಾಟಗಾರ್ತಿ ರಾಷ್ಟ್ರಮಾತೆ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ತಾಲೂಕು ಆಡಳಿತ ವತಿಯಿಂದ ಸಕಲ ಸಿದ್ದತೆ ನಡೆಸಿದ್ದು , ಕೊಟೂರು ರಸ್ತೆಯಲ್ಲಿರುವ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತಕ್ಕೆ ಪೂಜೆ ಸಲ್ಲಿಸಿ ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮನ ಭಾವಚಿತ್ರವಿರುವ ಬೆಳ್ಳಿ ರಥದಲ್ಲಿ ಮೆರವಣಿಗೆಯನ್ನು ಮಾಡಿ ತದ ನಂತರ ವೇದಿಕೆ ಕಾರ್ಯಕ್ರಮವನ್ನು ಮಾಡಲು ತೀರ್ಮಾನಿಸಲಾಯಿತು .
ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ. ನೇತ್ರಾವತಿ , ಲಿಂಗಾಯತ ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಹೊಂಬಾಳೆ ರೇವಣ್ಣ ಹುರುಳಿಹಾಳು , ಸುನಿಲ್ ಗೌಡ , ಮರಳು ಸಿದ್ದಪ್ಪ , ಗಿರೀಶ್ , ಸೇರಿದಂತೆ ಲಿಂಗಾಯತ ಸಮಾಜದ ಪ್ರಮುಖರು ಇದ್ದರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
