ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ.

ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ.

ಕೊಟ್ಟೂರು : ಇಂದಿನ ಯುಗದಲ್ಲಿ ಪ್ಲಾಸ್ಟಿಕ್ ನಮ್ಮ ಜೀವನದ ಅವಿಭಾಜ್ಯ ಅಂಗವಾದರೂ, ಅದರ ದುಷ್ಪರಿಣಾಮಗಳು ನಮ್ಮ ಪರಿಸರ, ಆರೋಗ್ಯ ಮತ್ತು ಭವಿಷ್ಯದ ಮೇಲೆ ಗಂಭೀರ ಪರಿಣಾಮ ಉಂಟುಮಾಡುತ್ತವೆ ಎಂದು ಪ್ರಾಂಶುಪಾಲ ಎಂ.ರವಿಕುಮಾರ್ ಹೇಳಿದರು.

ಪಟ್ಟಣದ ಕೊಟ್ಟೂರೇಶ್ವರ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಪರಿಸರ ರಕ್ಷಣೆಯ ಕೆಲಸ ಸರ್ಕಾರ ಅಥವಾ ಸಂಸ್ಥೆಗಳ ಜವಾಬ್ದಾರಿಯಷ್ಟೇ ಅಲ್ಲ ಇದು ಪ್ರತಿಯೊಬ್ಬರ ಕರ್ತವ್ಯ ಎಂದರು.

ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಂ.ಎಚ್. ಪ್ರಶಾಂತ್ ಕುಮಾರ್, ಉಪನ್ಯಾಸಕರಾದ ಡಾ. ಜೆ.ಬಿ ಸಿದ್ದನಗೌಡ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಶಿವಕುಮಾರ್, ಉಮೇಶ್, ಕೂಡ್ಲಿಗಿ ಕೊಟ್ರೇಶ್, ಡಾ ಕೆ. ಎಂ. ವೀರೇಶ್, ಪ್ರತಿಭಾ, ನಯನ, ಪೂಜಾ, ಗಾಯತ್ರಿ ಮುಂತಾದವರು ಪಾಲ್ಗೊಂಡಿದ್ದರು.
ಕೊಟ್ಟೂರಿನ ಕೊಟ್ಟೂರೇಶ್ವರ ಕಾಲೇಜಿನಲ್ಲಿ ಶನಿವಾರ ನಡೆದ ಪ್ಲಾಸ್ಟಿಕ್ ಮುಕ್ತ ಅಭಿಯಾನದಲ್ಲಿ ವಿದ್ಯಾರ್ಥಿಗಳು ಪ್ಲಾಸ್ಟಿಕ ಸಾಮಾಗ್ರಿಗಳನ್ನು ಸಂಗ್ರಹಿಸುತ್ತಿರುವುದು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend