ಸಹ ಪಠ್ಯ ಚಟುವಟಿಕೆಗಳಿಂದ ಜ್ಞಾನದ ವಿಸ್ತಾರ

ಸಹ ಪಠ್ಯ ಚಟುವಟಿಕೆಗಳಿಂದ ಜ್ಞಾನದ ವಿಸ್ತಾರ

ವರದಿ:ರಾಜಪ್ಪ.ಎಂ
=======================
ಹೂವಿನ ಹಡಗಲಿ: ಸಹ ಪಠ್ಯ ಚಟುವಟಿಕೆಗಳಿಂದ ಜ್ಞಾನದ ವಿಸ್ತಾರ ಆಗುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಅಭಿಮತ ವ್ಯಕ್ತಪಡಿಸಿದರು.

ಪಟ್ಟಣದ ಲಿಟಲ್ ಚಾಂಪ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ
ಶಿಕ್ಷಕರ ಕಲ್ಯಾಣ ನಿಧಿ
ವತಿಯಿಂದ ಆಯೋಜಿಸಿದ್ದ
2025-26 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ
ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಶಿಕ್ಷಕರು ಪಠ್ಯ ಬೋಧನೆ ಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ ತಮ್ಮ ಬೋಧನಾ ಕೌಶಲ್ಯವನ್ನು ಅಭಿವೃದ್ಧಿಗೊಳಿಸಿಕೊಳ್ಳಬೇಕು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ
ಸಹ ಪಠ್ಯ ಚಟುವಟಿಕೆಗಳ ಪೂರಕ ಎಂದು ಹೇಳಿದರು.

ಭಾಷಣ ಪ್ರಬಂಧ ರಸಪ್ರಶ್ನೆ ಪಾಠೋಪಕರಣ ತಯಾರಿಕೆ
ರಸಪ್ರಶ್ನೆ ಗಾಯನ ಚಿತ್ರಕಲೆ
ವಿವಿಧ ವಿಷಯಗಳ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಹೆಚ್ಚು ಪರಿಣಾಮಕಾರಿಯಾಗಿ ಬೋಧಿಸಲು ಸಹಕಾರಿ ಆಗುತ್ತದೆ ಎಂದು ಹೇಳಿದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ ಬಿ ಜಗದೀಶ್ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹ ಪಠ್ಯ ಚಟುವಟಿಕೆಗಳ ಪೂರಕ.
ಇದರಿಂದ ಪಡೆದ ಅನುಭವದಿಂದ ಉತ್ತಮ ರೀತಿಯಲ್ಲಿ ಪಾಠ ಪ್ರವಚನದಲ್ಲಿ ಶಿಕ್ಷಕರು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಗಡ್ಡಿ ಶಿವಕುಮಾರ್ ಮಾತನಾಡಿ ಶಿಕ್ಷಕರ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಲಾಖೆ ಪ್ರತಿವರ್ಷ ಈ ಕಾರ್ಯಕ್ರಮ ಆಯೋಜಿಸುತ್ತಿದೆ ಎಂದು ತಿಳಿಸಿದರು.

ತಾಲೂಕು ದೈಹಿಕ ಪರಿವೀಕ್ಷಕ ರಫಿ ಅಹಮದ್ ಖವಾಸ್ ಮುಂದಿನ ದಿನಗಳಲ್ಲಿ ನಡೆಯುವ ಸರ್ಕಾರಿ ನೌಕರರ ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದರು.

ಬಡ್ತಿ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ ಶೇಕ್ ಅಹಮದ್
ಶಿಕ್ಷಕರು ಸಾಂಸ್ಕೃತಿಕ ವಿಭಾಗದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.

ತಾಲೂಕು ಪ್ರೌಢಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಜಿ ಎಂ ಕಾಂತೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ವಿ ಎಚ್ ಯೇಸು
ಕೋಶಾಧಿಕಾರಿ ಪಕ್ಕೀರಸಾಬ್
ಸರ್ಕಾರಿ ನೌಕರರ ಸಂಘದ ನಿರ್ದೇಶಕ ಕೆ ಜಗದೀಶ್
ತಾಲೂಕು ಜಿ ಪಿ ಟಿ ಶಿಕ್ಷಕರ ಸಂಘದ ಅಧ್ಯಕ್ಷ ಯಂಕಾನಾಯ್ಕ
ಮುಖ್ಯ ಗುರು ಟಿ ಪಿ ವೀರೇಂದ್ರ
ಶಾಲೆಯ ಮುಖ್ಯ ಗುರುಗಳಾದ
ಕೊಟ್ರೇಶ್ ಇತರರು ಉಪಸ್ಥಿತರಿದ್ದರು.

ಶಿಕ್ಷಣ ಸಂಯೋಜಕ ಮಿಟ್ಯಾನಾಯ್ಕ್
ಹಣ್ಣಿ ನರೇಶ ಬಿ ಆರ್ ಪಿ ಬಸವರಾಜ
ನಿರ್ವಹಿಸಿದರು.
ತಾಲೂಕಿನ ಆಸಕ್ತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend