ಬಜೆಟ್ ನಲ್ಲಿ ಸ್ಪಷ್ಟ ಯೋಜನೆಗಳಿಲ್ಲ- ಡಾ.ಸೋನಾಲಿ ಸರ್ನೋಬತ್..
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿದೆ. ಮಹಿಳೆಯರು, ಯುವಕರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಅಭಿವೃದ್ಧಿಗೆ ಸ್ಪಷ್ಟ ಹಾಗೂ ಶಾಶ್ವತ ಯೋಜನೆಗಳು ಈ ಬಜೆಟ್‌ನಲ್ಲಿ ಕಾಣಿಸುತ್ತಿಲ್ಲ.
ಕೇವಲ ಭರವಸೆಗಳು ಮತ್ತು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಆರ್ಥಿಕತೆಯ ಮೇಲೆ ಹೆಚ್ಚಿನ ಸಾಲದ ಹೊರೆ ಹಾಕುವ ಪ್ರಯತ್ನ ಈ ಬಜೆಟ್‌ನಲ್ಲಿ ಕಾಣಿಸುತ್ತದೆ. ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಕೈಗಾರಿಕಾ ಹೂಡಿಕೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗೆ ಬೇಕಾದ ದೂರದೃಷ್ಟಿಯ ಯೋಜನೆಗಳು ಕಾಣಿಸದೇ ಇರುವುದೇ ವಿಷಾದಕರ ಸಂಗತಿ.
ವಿಶೇಷವಾಗಿ ಮಹಿಳಾ ಸಬಲೀಕರಣದ ವಿಷಯದಲ್ಲಿ ದೊಡ್ಡ ಘೋಷಣೆಗಳು ಮಾಡಿದರೂ, ಮಹಿಳೆಯರ ಉದ್ಯಮ, ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸ್ವಾವಲಂಬನೆಗಾಗಿ ಸಮರ್ಪಕ ಕ್ರಮಗಳು ಬಜೆಟ್‌ನಲ್ಲಿ ಕಾಣಿಸುತ್ತಿಲ್ಲ.
ರಾಜ್ಯದ ಸಮಗ್ರ ಅಭಿವೃದ್ಧಿಗೆ ದಾರಿಯಾಗುವ, ಮಹಿಳೆಯರಿಗೆ ಮತ್ತು ಯುವಕರಿಗೆ ಶಕ್ತಿಕರವಾಗುವ ಬಜೆಟ್ ಅನ್ನು ಜನರು ನಿರೀಕ್ಷಿಸಿದ್ದರು. ಆದರೆ ಈ ಬಜೆಟ್ ಆ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ.
ಜನಹಿತ, ಅಭಿವೃದ್ಧಿ ಮತ್ತು ಆರ್ಥಿಕ ಶಿಸ್ತನ್ನು ಕಾಪಾಡುವ ಬಜೆಟ್‌ಗಾಗಿ ನಾವು ಸದಾ ಹೋರಾಟ ಮಾಡುತ್ತೇವೆ ಎಂದರು…..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
