ಬೆಳಗಾವಿಯಲ್ಲಿ ಡಿಜೆ, ಲೌಡ್‌ಸ್ಪೀಕರ್ ಬಳಕೆಗೆ ಬ್ರೇಕ್: ಕಠಿಣ ನಿರ್ಧಾರ ಕೈಗೊಂಡ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್….!!!!

ಬೆಳಗಾವಿಯಲ್ಲಿ ಡಿಜೆ, ಲೌಡ್‌ಸ್ಪೀಕರ್ ಬಳಕೆಗೆ ಬ್ರೇಕ್: ಕಠಿಣ ನಿರ್ಧಾರ ಕೈಗೊಂಡ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
• ಬೆಳಗಾವಿಯಲ್ಲಿ ಡಿಜೆ, ಲೌಡ್‌ಸ್ಪೀಕರ್ ಬಳಕೆಗೆ ನಿಷೇಧ
• 75 ಡೆಸಿಬಲ್ ಮೀರಿದ ಶಬ್ದಕ್ಕೆ ಅವಕಾಶವಿಲ್ಲ
• ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ಕಟ್ಟುನಿಟ್ಟಿನ ನಿರ್ಬಂಧ
• ಉಲ್ಲಂಘಿಸಿದರೆ ಉಪಕರಣ ಜಪ್ತಿ, ಪ್ರಕರಣ ದಾಖಲು

ಬೆಳಗಾವಿ ಜಿಲ್ಲೆಯಲ್ಲಿ ಇನ್ನು ಮುಂದೆ ಡಿಜೆ ಮತ್ತು ಮಿತಿಮೀರಿದ ಶಬ್ದದ ಸಾಧನಗಳನ್ನು ಬಳಸುವಂತಿಲ್ಲ. ಸಾರ್ವಜನಿಕ ಶಾಂತಿ, ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯಾದ್ಯಂತ ಹಬ್ಬ, ಮೆರವಣಿಗೆ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅತಿಯಾದ ಶಬ್ದವನ್ನು ಹೊರಸೂಸುವ ಡಿಜೆ ವ್ಯವಸ್ಥೆಗಳು ಮತ್ತು ಶಬ್ದ ವೃದ್ಧಿ ಸಾಧನಗಳ ಬಳಕೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮೊಹಮ್ಮದ್ ರೋಷನ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದ್ದಾರೆ. ಪೊಲೀಸ್ ಆಯುಕ್ತರು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವರದಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂದಿನ ಆದೇಶದವರೆಗೆ ಯಾವುದೇ ರೀತಿಯ ಡಿಜೆ, ಬೇಸ್ ಬೂಸ್ಟರ್‌ಗಳು ಮತ್ತು ಮೊಬೈಲ್ ಡಿಜೆ ವಾಹನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ವಿಶೇಷವಾಗಿ ವಸತಿ ಪ್ರದೇಶಗಳು, ಆಸ್ಪತ್ರೆಗಳು, ಶಾಲೆಗಳು, ನ್ಯಾಯಾಲಯಗಳು ಮತ್ತು ಧಾರ್ಮಿಕ ಸ್ಥಳಗಳ ಸುತ್ತಮುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ಶಬ್ದ ಮಾಲಿನ್ಯವನ್ನು ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಒಂದು ವೇಳೆ ಯಾರಾದರೂ ಈ ಆದೇಶವನ್ನು ಉಲ್ಲಂಘಿಸಿದರೆ, ಕಾರ್ಯಕ್ರಮವನ್ನು ತಕ್ಷಣ ಸ್ಥಗಿತಗೊಳಿಸುವುದು, ಡಿಜೆ ಉಪಕರಣಗಳನ್ನು ವಶಪಡಿಸಿಕೊಳ್ಳುವುದು, ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಮತ್ತು ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಅನಿವಾರ್ಯ ಸಂದರ್ಭಗಳಲ್ಲಿ ಮಿತ ಶಬ್ದದ ಸಾಧನಗಳನ್ನು ಬಳಸಲು ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend