1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಸಿಪಿಐ ವೀರಣ್ಣ ದೊಡ್ಡಮನಿ..!!
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ಸಿಪಿಐಯನ್ನು ಬಂಧಿಸಿದ್ದಾರೆ.
ಗುರುಮಠಕಲ್ ಸಿಪಿಐ ವೀರಣ್ಣ ದೊಡ್ಡಮನಿ ಅವರು ಪ್ರಕರಣವೊಂದರ ಆರೋಪಿಗಳನ್ನು ಬಂಧಿಸಲು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಆನಂದ್ ಎಂಬುವರು ಲೋಕಾಯುಕ್ತರಿಗೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಗುರುಮಠಕಲ್ ಪಟ್ಟಣದ ಸಿಪಿಐ ಕ್ವಾಟರ್ಸ್‌ನಲ್ಲೇ 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ವೀರಣ್ಣ ದೊಡ್ಡಮನಿಯನ್ನು ರೆಡ್ ಹ್ಯಾಂಡ್గా ಹಿಡಿದಿದ್ದಾರೆ.
ಬಂಧಿತ ಸಿಪಿಐ ವೀರಣ್ಣ ದೊಡ್ಡಮನಿಯನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್‌ಪಿ ಜೆ.ಹೆಚ್. ಇನಾಮದಾರ ಹಾಗೂ ಪಿಐ ಸಿದ್ದರಾಯ ಬೆಳ್ಳೂರಗಿ ನೇತೃತ್ವದಲ್ಲಿ ದಾಳಿ ನಡೆದಿತ್ತು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
