ಮಳೆಯಿಂದ ಹಾಳಾದ ರಸ್ತೆ ದುರಸ್ತಿ: ಸಾರ್ವಜನಿಕರ ಸುರಕ್ಷತೆಗೆ ಇಟ್ಟಿಗಿ ಪೊಲೀಸರ ಮಾನವೀಯ ಕಾರ್ಯ
ವಿಜಯನಗರ: ಮಳೆಯಿಂದಾಗಿ ಹದಗೆಟ್ಟು ಗುಂಡಿಗಳಿಂದ ಅಪಾಯಕಾರಿಯಾಗಿದ್ದ ರಸ್ತೆಯನ್ನು ಇಟ್ಟಿಗಿ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿ ಸ್ವತಃ ಮುಂದಾಗಿ ದುರಸ್ತಿ ಮಾಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇಟ್ಟಿಗಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಯಲ್ಲಿ ಮಳೆಯಿಂದ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿ ವಾಹನ ಸವಾರರು ಹಾಗೂ ಪಾದಚಾರಿಗಳು ಸಂಕಷ್ಟ ಅನುಭವಿಸುತ್ತಿದ್ದರು. ಈ ಹಿನ್ನೆಲೆ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಪಿಎಸ್ಐ ರವರು ತಮ್ಮ ಸಿಬ್ಬಂದಿಗಳೊಂದಿಗೆ ರಸ್ತೆ ಗುಂಡಿಗಳಿಗೆ ಮಣ್ಣು ತುಂಬಿಸಿ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಕೈಗೊಂಡರು.
ಪೊಲೀಸರ ಈ ಸೇವಾ ಮನೋಭಾವದ ಕಾರ್ಯಕ್ಕೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದು, ಜನಸ್ನೇಹಿ ಪೊಲೀಸ್ ಕಾರ್ಯಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ತಿಳಿಸಿದ್ದಾರೆ…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
