;

ಗೋವಾ ಪ್ರವಾಸ ಮುಗಿಸಿ ಮರಳುತ್ತಿದ್ದವರ ಕಾರು ಪಿಕಪ್‌ಗೆ ಡಿಕ್ಕಿ: ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ…!!!”

ಗೋವಾ ಪ್ರವಾಸ ಮುಗಿಸಿ ಮರಳುತ್ತಿದ್ದವರ ಕಾರು ಪಿಕಪ್‌ಗೆ ಡಿಕ್ಕಿ: ಇಬ್ಬರ ಸಾ. ವು, ಮೂವರ ಸ್ಥಿತಿ ಗಂಭೀರ

ಜೊಯಿಡಾ: ಗೋವಾ–ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ತಿನೆಘಾಟ್ ಸಮೀಪದ ಗವೆಗಾಳಿ ಕ್ರಾಸ್ ಬಳಿ ಮಧ್ಯರಾತ್ರಿ ಸುಮಾರು 2 ಗಂಟೆಯ ವೇಳೆಗೆ ಕಾರು ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃ. ತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಖಾನಾಪುರದಿಂದ ಕೋಳಿಗಳನ್ನು ಸಾಗಿಸಿಕೊಂಡು ಗೋವಾದತ್ತ ತೆರಳುತ್ತಿದ್ದ ಬೊಲೆರೋ ಪಿಕಪ್ ವಾಹನ ಹಾಗೂ ಗೋವಾದಿಂದ ಪ್ರವಾಸ ಮುಗಿಸಿ ಆಂಧ್ರಪ್ರದೇಶದತ್ತ ಮರಳುತ್ತಿದ್ದ ಸ್ವಿಫ್ಟ್ ಕಾರು ನಡುವೆ ಈ ಅಪಘಾತ ಸಂಭವಿಸಿದೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ಸ್ವಿಫ್ಟ್ ಕಾರು ಮುಂಚೂಣಿಯಲ್ಲಿದ್ದ ವಾಹನವನ್ನು ಓವರ್‌ಟೇಕ್ ಮಾಡಲು ಯತ್ನಿಸಿದೆ. ಈ ವೇಳೆ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿಗೆ ಚಲಿಸಿ, ಎದುರಿನಿಂದ ಬರುತ್ತಿದ್ದ ಬೊಲೆರೋ ಪಿಕಪ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ತೀವ್ರತೆಗೆ ಸ್ವಿಫ್ಟ್ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಆಂಧ್ರಪ್ರದೇಶದ ಅನಂತಪುರ ಮೂಲದ ಮುರಳಿ ಹಾಗೂ ಮಹೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಕಾರಿನ ಹಿಂಭಾಗದಲ್ಲಿದ್ದ ಶೇಖ್ ವಾಲಿ, ಬೊಲೆರೋ ಪಿಕಪ್‌ನಲ್ಲಿದ್ದ ಕಲಪ್ಪ ಮದರ ಹಾಗೂ ಅವರ ಪತ್ನಿ ದ್ರಾಕ್ಷಿಣಿ ಮದರ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಮೂಲತಃ ವಿಜಯಪುರ ನಿವಾಸಿಗಳಾಗಿದ್ದು, ಸದ್ಯ ಗೋವಾದಲ್ಲಿ ನೆಲೆಸಿದ್ದರು ಎನ್ನಲಾಗಿದೆ.

ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಕ್ಷಣವೇ 108 ಆಂಬುಲೆನ್ಸ್ ಮೂಲಕ ರಾಮನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ವಿಷಯ ತಿಳಿಯುತ್ತಿದ್ದಂತೆ ಜೊಯಿಡಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಚಂದ್ರಶೇಖರ ಹರಿಹರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಪಘಾತಕ್ಕೆ ಸಂಬಂಧಿಸಿದಂತೆ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ…

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;