;

ಬಸ್ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿದ್ದ ಅಂತರರಾಜ್ಯ ಕಳ್ಳರ ಗ್ಯಾಂಗ್ ಬಲೆಗೆ: 225 ಗ್ರಾಂ ಚಿನ್ನ ವಶ…!!!

ಬಸ್ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿದ್ದ ಅಂತರರಾಜ್ಯ ಕಳ್ಳರ ಗ್ಯಾಂಗ್ ಬಲೆಗೆ: 225 ಗ್ರಾಂ ಚಿನ್ನ ವಶ…!!!

ಬೆಳಗಾವಿ ಪೊಲೀಸರ ಕಾರ್ಯಾಚರಣೆ; ಉತ್ತರ ಪ್ರದೇಶ ಮೂಲದ 11 ಆರೋಪಿಗಳ ಬಂಧನ

ಬೆಳಗಾವಿ: ಜಿಲ್ಲೆಯ ವಿವಿಧ ಬಸ್ ಮಾರ್ಗಗಳಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡುತ್ತಿದ್ದ ಅಂತರರಾಜ್ಯ ಕಳ್ಳರ ಗ್ಯಾಂಗ್‌ನ್ನು ಬೆಳಗಾವಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 11 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 225 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಳೆದ ಮೇ 11ರಂದು ಕಾಗವಾಡದಿಂದ ಶಿರಗುಪ್ಪಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೈಶಾಲಿ ದೊಡ್ಮನೆ ಅವರ 54 ಗ್ರಾಂ ತೂಕದ ಬಂಗಾರದ ಆಭರಣ ಕಳುವಾಗಿತ್ತು. ಈ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿತ್ತು.

ತನಿಖೆ ವೇಳೆ ಎರಡು ಪ್ರತ್ಯೇಕ ತಂಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರೋಪಿಗಳ ಜಾಲ ಪತ್ತೆಯಾಗಿದೆ. 6 ಸದಸ್ಯರ ಒಂದು ತಂಡ ಹಾಗೂ 5 ಸದಸ್ಯರ ಮತ್ತೊಂದು ತಂಡ ಸೇರಿದಂತೆ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಉತ್ತರ ಪ್ರದೇಶ ಮೂಲದವರಾಗಿದ್ದಾರೆ ಎಂದು ಎಸ್‌ಪಿ ತಿಳಿಸಿದರು.

ಆರೋಪಿಗಳ ವಿರುದ್ಧ ಅಥಣಿ, ಚಿಕ್ಕೋಡಿ ಹಾಗೂ ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿಯೂ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಪ್ರಯಾಣಿಕರ ನಡುವೆ ಬೆರೆತು, ಉತ್ತಮ ಉಡುಪು ಧರಿಸಿ, ಚಿನ್ನಾಭರಣ ಧರಿಸಿರುವವರನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸುತ್ತಿದ್ದ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;