ಸರ್ಕಾರಿ ಶಾಲೆ ಉಳಿಸೋಣ ಬೆಳೆಸೋಣ – ಸತೀಶ್.
ಕೊಟ್ಟೂರು: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ದೊರೆಯಲು ಸರ್ಕಾರಿ ಶಾಲೆಗಳು ಸಹಕಾರಿಯಾಗಿವೆ ಎಂದು ದಾನಿಗಳು ಹಾಗೂ ನಿವೃತ್ತ ಪ್ರಾದ್ಯಾಪಕ ಟಿ.ಸತೀಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಶ್ರೀಗುರುಬಸವೇಶ್ವರ ಸ್ವಾಮಿ ಸರ್ಕಾರಿ ಹಿ.ಪ್ರಾ. ಶಾಲೆಯಲ್ಲಿ ಶುಕ್ರವಾರ ತುಂಬರಗುದ್ಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಲಿಕಾ ಸಾಮಾಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಸಂಸ್ಕಾರವನ್ನು ಮೈಗೂಡಿಸಿಕೊಂಡಾಗ ಮಾತ್ರ ಪಡೆದ ಪದವಿಗಳಿಗೆ ಅರ್ಥ ಸಿಗುತ್ತದೆ ಎಂದರು. ಸರ್ಕಾರ ಸೌಲಭ್ಯ ಹಾಗೂ ಸಂಘ ಸಂಸ್ಥೆಗಳ ನೆರವಿನಿಂದ ಪರಿಶ್ರಮ ಪಟ್ಟು ವಿದ್ಯಾಭ್ಯಾಸ ಮಾಡಿ ಉತ್ತಮ ಬದುಕನ್ನು ಕಟ್ಟಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಿವೃತ್ತ ಮುಖ್ಯ ಶಿಕ್ಷಕಿ ಎಸ್.ಎಂ.ನಳಿನಿ ಮಾತನಾಡಿ ಕಳೆದ 13 ವರ್ಷಗಳಿಂದ ನಿರಂತರವಾಗಿ ಶಾಲೆಗಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸುತ್ತಿರುವ ಟ್ರಸ್ಟ್ ಮುಖ್ಯಸ್ಥ ಸತೀಶ್ ಅವರ ಕಾರ್ಯ ಪ್ರಶಂಸನೀಯವಾದದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಶಿಕ್ಷಕಿ ತಿಪ್ಪಮ್ಮ ಮುಂತಾದವರು ಪಾಲ್ಗೊಂಡಿದ್ದರು.
ಚಿತ್ರ– ಕೊಟ್ಟೂರಿನ ಶ್ರಿಗುರುಬಸವೇಶ್ವರ ಸ್ವಾಮಿ ಸರ್ಕಾರಿ ಹಿ.ಪ್ರಾ.ಶಾಲೆಯಲ್ಲಿ ತುಂಬರಗುದ್ದಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಲೇಖನ ಸಾಮಾಗ್ರಿ ವಿತರಿಸಲಾಯಿತು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
