;

ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಪ್ರದೇಶಕ್ಕೆ ಸೇರಿಸುವಂತೆ ಮಾತನಾಡಿರುವುದು ಖಂಡನೀಯ ಎಂದು ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಆಕ್ರೋಶ…!!!

ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಪ್ರದೇಶಕ್ಕೆ ಸೇರಿಸುವಂತೆ ಮಾತನಾಡಿರುವುದು ಖಂಡನೀಯ ಎಂದು ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ಅಸಮಾಧಾನಗೊಂಡು, ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಪ್ರದೇಶಕ್ಕೆ ಅಥವಾ ಚಳ್ಳಕೆರೆ ಕ್ಷೇತ್ರಕ್ಕೆ ಸೇರಿಸುವಂತೆ ಮಾತನಾಡುತ್ತಿದ್ದಾರೆ ಎಂದು ತಿಪ್ಪೇಸ್ವಾಮಿ ಆರೋಪಿಸಿದ್ದಾರೆ.

ಮೊಳಕಾಲ್ಮೂರು ಕ್ಷೇತ್ರದಲ್ಲೇ ಬೆಳೆದು, ಇದೇ ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ನೀವು, ಕ್ಷೇತ್ರದ ಅಸ್ತಿತ್ವದ ಬಗ್ಗೆ ಈ ರೀತಿಯ ಹೇಳಿಕೆ ನೀಡುತ್ತಿರುವುದು ಜನರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಅವರು ಆಕ್ಷೇಪಿಸಿದ್ದಾರೆ.

ಇಷ್ಟು ವರ್ಷ ಶಾಸಕರಾಗಿ ಕ್ಷೇತ್ರವನ್ನು ಪ್ರತಿನಿಧಿಸಿರುವ ನೀವು, ಮೊಳಕಾಲ್ಮೂರು ಕ್ಷೇತ್ರದ ಅಭಿವೃದ್ಧಿಗಾಗಿ ಮಾಡಿರುವ ಪ್ರಮುಖ ಕೆಲಸಗಳೇನು ಎಂಬುದನ್ನು ಜನರ ಮುಂದೆ ಸ್ಪಷ್ಟಪಡಿಸಬೇಕು ಎಂದು ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ.

ಸಚಿವ ಸ್ಥಾನ ಸಿಗಲಿಲ್ಲ ಎಂಬ ರಾಜಕೀಯ ಅಸಮಾಧಾನ ಏನೇ ಇದ್ದರೂ, ಕ್ಷೇತ್ರದ ಜನರ ಭಾವನೆ ಹಾಗೂ ಕರ್ನಾಟಕದ ಅಖಂಡತೆಯನ್ನು ಗೌರವಿಸುವುದು ಜನಪ್ರತಿನಿಧಿಯ ಜವಾಬ್ದಾರಿ ಎಂದಿದ್ದಾರೆ.

ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ಹಲವು ಸಮಸ್ಯೆಗಳನ್ನು ಕ್ಷೇತ್ರದ ಜನರು ಎದುರಿಸುತ್ತಿದ್ದಾರೆ. ಇವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತಂದು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕ್ಷೇತ್ರವನ್ನು ಬೇರೆಡೆ ಸೇರಿಸುವ ಮಾತುಗಳಿಗಿಂತ, ಮೊಳಕಾಲ್ಮೂರು ಕ್ಷೇತ್ರವನ್ನು ಅಭಿವೃದ್ಧಿಯ ದಾರಿಯಲ್ಲಿ ಮುನ್ನಡೆಸುವ ಕೆಲಸವಾಗಬೇಕು. ಜನರಿಗೆ ಬೇಕಿರುವುದು ರಾಜಕೀಯ ಹೇಳಿಕೆಗಳಲ್ಲ, ಕಣ್ಣಿಗೆ ಕಾಣುವ ಅಭಿವೃದ್ಧಿ ಎಂದು ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಹೇಳಿದ್ದಾರೆ…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend