;

ಹಂಪಾಪಟ್ಟಣ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ಸಿಎಂಗೆ ಮನವಿ…!!!

ಹಂಪಾಪಟ್ಟಣ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ಸಿಎಂಗೆ ಮನವಿ

​ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಹಂಪಾಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ದೊರೆಯುವ ಉದ್ದೇಶದಿಂದ, ಗ್ರಾಮದಲ್ಲಿ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ (PHC) ಸ್ಥಾಪಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಮನವಿ ಸಲ್ಲಿಸಲಾಯಿತು.
​ಪ್ರಸ್ತುತ ಹಂಪಾಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ತುರ್ತು ಹಾಗೂ ಸಾಮಾನ್ಯ ವೈದ್ಯಕೀಯ ಚಿಕಿತ್ಸೆಗಾಗಿ ದೂರದ ನಗರಗಳಿಗೆ ಅಲೆಯುವಂತಾಗಿದೆ. ಇದರಿಂದಾಗಿ ವೃದ್ಧರು, ಮಕ್ಕಳು, ಗರ್ಭಿಣಿಯರು ಹಾಗೂ ಬಡ ಗ್ರಾಮೀಣ ಭಾಗದ ಜನರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಸಕಾಲಕ್ಕೆ ವೈದ್ಯಕೀಯ ನೆರವು ಸಿಗದೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
​ಆದ್ದರಿಂದ ಹಂಪಾಪಟ್ಟಣ ಗ್ರಾಮಕ್ಕೆ ಶೀಘ್ರವೇ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಿ, ಅಗತ್ಯ ವೈದ್ಯರು, ಶುಶ್ರೂಷಕರು, ಔಷಧಿ ಹಾಗೂ ಮೂಲಭೂತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಒತ್ತಾಯಿಸಲಾಯಿತು.
​ಗ್ರಾಮೀಣ ಜನರ ಬಹುದಿನಗಳ ಈ ನ್ಯಾಯಯುತ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಲಾಯಿತು.
​ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ದೇವರ ಮನೆ ನೀಲಪ್ಪ, ಹಂಪಾಪಟ್ಟಣ ಗ್ರಾಮ ಘಟಕದ ಅಧ್ಯಕ್ಷರಾದ ಕೊಟ್ರೇಶ್ ಮಣಿಗರ್ ಹಾಗೂ ಸಂಘಟನೆಯ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ: ಅನಿಲ್ ಕುಮಾರ್ ಹುಲಿಕುಂಟೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;