;

ಪ್ರಸಾದ ಸೇವಿಸಿ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ…!!!

ಪ್ರಸಾದ ಸೇವಿಸಿ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಿ ಜಾತ್ರಾ ಮಹೋತ್ಸವದಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥಗೊಂಡು ಕಬ್ಬೂರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗ್ರಾಮಸ್ಥರನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಗುರುವಾರ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಯಲ್ಲಿ ದಾಖಲಾಗಿರುವ ಪ್ರತಿಯೊಬ್ಬರ ಬಳಿ ತೆರಳಿ ಆರೋಗ್ಯ ವಿಚಾರಿಸಿದರು. ಆತಂಕಕ್ಕೆ ಒಳಗಾಗದಂತೆ ರೋಗಿಗಳು ಹಾಗೂ ಕುಟುಂಬಸ್ಥರಿಗೆ ಧೈರ್ಯ ಹೇಳಿದರು.

ಯಾರಿಗೂ ಯಾವುದೇ ತೊಂದರೆ ಆಗದಂತೆ ಚಿಕಿತ್ಸೆ ನೀಡಲು ಹಾಗೂ ಅಗತ್ಯವಿದ್ದರೆ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಚಿಕಿತ್ಸೆ ಮತ್ತು ಔಷಧಿಗಳ ಲಭ್ಯತೆಯ ಬಗ್ಗೆ ಮಾಹಿತಿ ಪಡೆದರು.

ಪ್ರಕರಣದ ಬಗ್ಗೆ ತನಿಖೆ ನಡೆಸಿ, ಆಹಾರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲು ಮತ್ತು ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಶಿಬಿರ ನಡೆಸಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ. ಪಾಟೀಲ, ತಾಲೂಕು ಆರೋಗ್ಯಾಧಿಕಾರಿ ಡಾ.ಆರ್. ಎಸ್. ಕಣದಾಳೆ, ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ ಶಿವಾನಂದ ಶಿರಗಾವಿ, ಡಾ.ಅನಿಲ್ ಪರೀಟ್, ಡಾ.ಜಯಲಕ್ಷ್ಮಿ ಮುಸಾಳೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;