;

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: KSRTC ಬಸ್–ಲಾರಿ ಡಿಕ್ಕಿ, ಚಾಲಕ ಸೇರಿ ಇಬ್ಬರು ಸಾವು!!!

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: KSRTC ಬಸ್–ಲಾರಿ ಡಿಕ್ಕಿ, ಚಾಲಕ ಸೇರಿ ಇಬ್ಬರು ಸಾವು!

15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ; ಓರ್ವನ ಸ್ಥಿತಿ ಗಂಭೀರ, ದಾವಣಗೆರೆ ಆಸ್ಪತ್ರೆಗೆ ಸ್ಥಳಾಂತರ

ಚಿತ್ರದುರ್ಗ: ಜಿಲ್ಲೆಯ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗುರುವಾರ ಸಂಭವಿಸಿದ ಈ ಅಪಘಾತದಲ್ಲಿ ಬಸ್ ಚಾಲಕ ಬಾಪು ಪಾಟೀಲ್ (36) ಹಾಗೂ 14 ವರ್ಷದ ಪ್ರಯಾಣಿಕ ಗಗನ್ ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ರಾಜು ನಾಯ್ಕ ಎಂಬ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿಪಿಐ ಬಾಲಚಂದ್ರ ನಾಯ್ಕ್ ಅವರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;