ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸದಿದ್ದರೆ ಗ್ರಾಮ ಪಂಚಾಯತಿ ಮುಂದೆ ಕರುನಾಡ ವಿಜಯ ಸೇನೆ ವತಿಯಿಂದ ಉಗ್ರವಾದ ಹೋರಾಟದ ಎಚ್ಚರಿಕೆ.
ಹಗರಿಬೊಮ್ಮನಹಳ್ಳಿ: ತಾಲೂಕಿನ ಹಲಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಲೆದೋರಿರುವ ತೀವ್ರ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು ಎಂದು ಆಗ್ರಹಿಸಿ ಕರುನಾಡ ವಿಜಯ ಸೇನೆ ಸಂಘಟನೆಯ ವತಿಯಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಪಿಡಿಓ ಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಆರ್.ಆರ್ ತಾಂಡ ಗ್ರಾಮ ಘಟಕದ ಅಧ್ಯಕ್ಷ ಕೆ ಮಲ್ಲೇಶ ನಾಯ್ಕ ಮಾತನಾಡಿ ಹಲಗಾಪುರ ಗ್ರಾ.ಪಂ. ವ್ಯಾಪ್ತಿಯ ಹಲವು ಬಡಾವಣೆಗಳಲ್ಲಿ ಕಳೆದ ಕೆಲ ದಿನಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದೆ ಗ್ರಾಮಸ್ಥರು ನಿತ್ಯ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ದಿನಬಳಕೆಯ ಹಾಗೂ ಕುಡಿಯುವ ನೀರಿಗಾಗಿ ಮಹಿಳೆಯರು, ವೃದ್ಧರು ಖಾಲಿ ಕೊಡಗಳೊಂದಿಗೆ ಅಲೆಯುವಂತಾಗಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಸೂಕ್ತ ಗಮನಹರಿಸಿ ಶಾಶ್ವತ ಪರಿಹಾರ ಕಲ್ಪಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದಲ್ಲಿನ ಕುಡಿಯುವ ನೀರಿನ ಘಟಕಗಳು, ಪೈಪ್‌ಲೈನ್ ಹಾಗೂ ಬೋರ್‌ವೆಲ್‌ಗಳ ನಿರ್ವಹಣೆಯನ್ನು ತ್ವರಿತವಾಗಿ ಪರಿಶೀಲಿಸಿ, ಜನಸಾಮಾನ್ಯರಿಗೆ ಯಾವುದೇ ಸಮಸ್ಯೆಯಾಗದಂತೆ ನಿರಂತರ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಗ್ರಾಮಸ್ಥರನ್ನು ಒಗ್ಗೂಡಿಸಿ ಗ್ರಾಮ ಪಂಚಾಯತಿ ಕಾರ್ಯಾಲಯದ ಎದುರು ತೀವ್ರ ಸ್ವರೂಪದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆಯಿಂದ ನೀಡಿದರು.
ಈ ಸಂದರ್ಭದಲ್ಲಿ ಕರುನಾಡ ವಿಜಯ ಸೇನೆ ಸಂಘಟನೆಯ ತಾಲ್ಲೂಕು ಉಪಾಧ್ಯಕ್ಷ ಗುರ್ಯ ನಾಯ್ಕ್ , ಸಂಘಟನೆಯ ಯವ ಕಾನೂನು ಸಲಹೆಗಾರರು ಸುಭಾಷ್ ನಾಯ್ಕ್ ಆರ್ ಗ್ರಾಮ ಘಟಕದ ಪದಾಧಿಕಾರಿಗಳಾದ
ಸೊಟ್ಟ ರಾಜು ನಾಯ್ಕ್ ,
ಲೋಕೇಶ್ ನಾಯ್ಕ್
H ಮಂಜು ನಾಯ್ಕ್ ,
ಕುಮಾರ್ ನಾಯ್ಕ್ ,
ಬಾಜಿ ಲೋಕೇಶ್ಭಾವಿ ಗೋವಿಂದ ನಾಯ್ಕ, ರಾಜ್ ನಾಯ್ಕ್, ರಂಗ ನಾಯ್ಕ್, ಕೊಟ್ರೆಶ್ ನಾಯ್ಕ್, ವಾಲ್ಯ ನಾಯ್ಕ್ ಹಾಗೂ ಗ್ರಾಮದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
