;

ಜಿಲ್ಲೆಯ 11ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪ್ರಕ್ರಿಯೆ ಸಸೂತ್ರ…!!!

ವರದಿ. ಎಂ. ಎಲ್. ವೆಂಕಟೇಶ್ ಬಳ್ಳಾರಿ

ಬಳ್ಳಾರಿಯಲ್ಲಿ 887 ಜನರಿಗೆ ಕೋವಿಡ್ ಲಸಿಕೆ
ಬಳ್ಳಾರಿ,ಜ.16

ಬಳ್ಳಾರಿ ಜಿಲ್ಲೆಯ 11 ಲಸಿಕಾ ಕೇಂದ್ರಗಳಲ್ಲಿ ಶನಿವಾರ ಕೋವಿಡ್ ಲಸಿಕಾ ಪ್ರಕ್ರಿಯೆ ಅತ್ಯಂತ ಸುಸೂತ್ರವಾಗಿ ಜರುಗಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಲೇ ಜಿಲ್ಲೆಯ ಲಸಿಕಾ ಕೇಂದ್ರಗಳಲ್ಲಿ ಮೊದಲ ಸುತ್ತಿನಲ್ಲಿ ಆರೋಗ್ಯ ಸೇವಾ ಸಿಬ್ಬಂದಿಗೆ ಲಸಿಕೆ ಹಾಕುವ ಪ್ರಕ್ರಿಯೆಗೆ ಚಾಲನೆ ದೊರೆಯಿತು.
ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಮಾಹಾಮಾರಿ ಸಂದರ್ಭದಲ್ಲಿ ಕೆಲಸ ನಿರ್ವಹಿಸಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ಮೆಚ್ಚುಗೆಗಳಿಸಿದ್ದ ಗ್ರೂಪ್ ಡಿ ಸಿಬ್ಬಂದಿ ಶಾಂತಕುಮಾರ್ ಅವರಿಗೆ ಮೊದಲಿಗೆ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಲಾಯಿತು.
11 ಲಸಿಕಾ ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ 100 ಆರೋಗ್ಯ ಸಿಬ್ಬಂದಿಗಳಂತೆ ಒಟ್ಟು 887 ಜನರಿಗೆ ಲಸಿಕೆ ನೀಡಲಾಗಿದೆ. ಗ್ರೂಪ್ ಡಿ ಸಿಬ್ಬಂದಿ, ನರ್ಸ್, ಲ್ಯಾಬ್ ಟೆಕ್ನಿಷಿಯನ್, ವೈದ್ಯರು ಸೇರಿದಂತೆ ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ.
ಲಸಿಕೆ ಪಡೆದವರಿಗೆ 28 ದಿನಗಳ ನಂತರ ಮತ್ತೆ ಎರಡನೇ ಡೊಸ್ ಪಡೆಯಲು ಆಗಮಿಸಬೇಕು; ತಮಗೆ ಎಸ್‍ಎಂಎಸ್ ಸಂದೇಶ ಕಳುಹಿಸಲಾಗುತ್ತದೆ. ಕಡ್ಡಾಯವಾಗಿ ಸಾಮಾಜಿಕ ಅಂತರ ಪಾಲಿಸಬೇಕು ಮತ್ತು ಮಾಸ್ಕ್ ಧರಿಸುವಿಕೆ ಮತ್ತು ಸ್ಯಾನಿಟೈಸರ್‍ನಿಂದ ಆಗಾಗ ಕೈಗಳ ಸ್ವಚ್ಛಗೊಳಿಸುವಿಕೆ ಕೆಲಸ ಮಾಡಬೇಕು ಎಂದು ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ಹಾಕಿದ ಕಸ್ತೂರಿ ನೇತೃತ್ವದ ತಂಡದ ಸಿಬ್ಬಂದಿ ಲಸಿಕೆ ಹಾಕಿಸಿಕೊಂಡವರಿಗೆ ತಿಳಿಸುತ್ತಿದ್ದುದು ಕಂಡುಬಂದಿತು.
ಲಸಿಕೆ ಪಡೆದ ನಂತರ ಲಸಿಕೆ ಹಾಕಿಸಿಕೊಂಡವರಿಗೆ ಅಬ್ಸರ್ವೇಶನ್ ಕೊಣೆಯಲ್ಲಿ ಅರ್ಧಗಂಟೆಗಳ ಕಾಲ ನಿಗಾವಹಿಸಿರುವುದು ಕಂಡುಬಂದಿತು; ಜಿಲ್ಲೆಯಲ್ಲಿ ಯಾವುದೇ ರೀತಿಯ ಅಡ್ಡಪರಿಣಾಮಗಳು ಉಂಟಾದ ಬಗ್ಗೆ ವರದಿಯಾಗಿರುವುದಿಲ್ಲ. ಕೇಂದ್ರದೊಳಗೆ ಲಸಿಕೆ ಪಡೆಯುವವರು ಹಾಗೂ ನಿಯೋಜಿತ ಅಧಿಕಾರಿಗಳ ಪ್ರವೇಶ ಹೊರತುಪಡಿಸಿ ಉಳಿದವರನ್ನು ನಿಷೇಧಿಸಲಾಗಿತ್ತು.
ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಪಂ ಸಿಇಒ ಕೆ.ಆರ್.ನಂದಿನಿ, ಎಸ್ಪಿ ಸೈದುಲು ಅಡಾವತ್, ಶಾಸಕರಾದ ಜಿ.ಕರುಣಾಕರ ರೆಡ್ಡಿ, ಸೋಮಶೇಖರ ರೆಡ್ಡಿ ಅವರು ಜಿಲ್ಲಾಸ್ಪತ್ರೆ ಹಾಗೂ ವಿಮ್ಸ್‍ಗೆ ಭೇಟಿ ನೀಡಿ ಲಸಿಕೆ ಪ್ರಕ್ರಿಯೆಯನ್ನು ಪರಿಶೀಲಿಸಿದರು ಹಾಗೂ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಮೊದಲ ಹಂತದಲ್ಲಿ ಆರೋಗ್ಯ ಸೇವಾ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದ್ದು,ಜಿಲ್ಲೆಯಲ್ಲಿ ಮೊದಲ ಸುತ್ತಿನಲ್ಲಿ 19432 ಆರೋಗ್ಯ ಸೇವಾ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ಹಾಕಲು ನಿರ್ಧರಿಸಲಾಗಿದ್ದು, ನೋಂದಣಿ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಶನಿವಾರ ವಿಮ್ಸ್, ಜಿಲ್ಲಾಸ್ಪತ್ರೆ, 7 ಸಾರ್ವಜನಿಕ ಆಸ್ಪತ್ರೆಗಳು, ಮಿಲ್ಲರಪೇಟೆ ನಗರ ಆರೋಗ್ಯ ಕೇಂದ್ರ, ಚೆಳ್ಳಗುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂದರೇ 11 ಕಡೆ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಆರೋಗ್ಯ ಸಿಬ್ಬಂದಿಗೆ ಪ್ರತಿ ಕೇಂದ್ರದಲ್ಲಿ ತಲಾ 100 ರಂತೆ 1100 ಜನರಿಗೆ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಸರಕಾರಿ, ಖಾಸಗಿ ಸೇರಿದಂತೆ 145 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಇಲ್ಲಿ ಈಗಾಗಲೇ ನೋಂದಾಯಿಸಲಾಗಿರುವ ಆರೋಗ್ಯ ಸೇವಾ ಸಿಬ್ಬಂದಿಗೆ ಜ.18ರಿಂದ ಲಸಿಕೆ ನೀಡಲಾಗುವುದು ಎಂದರು.
ಲಸಿಕೆ ಪಡೆದ ಗ್ರೂಪ್ ಡಿ ಸಿಬ್ಬಂದಿ ಶಾಂತಕುಮಾರ್ ಅವರು ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಎಡೆಬಿಡದೇ ಕೆಲಸ ನಿರ್ವಹಿಸಿದ್ದು; ಯಾವುದೇ ರೀತಿಯ ಸೊಂಕಿಗೆ ಒಳಗಾಗಿರಲಿಲ್ಲ. ಮುನ್ನಚ್ಚೆರಿಕೆ ಕ್ರಮವಾಗಿ ಹಾಗೂ ಸಹದ್ಯೋಗಿಗಳಲ್ಲಿ ಧೈರ್ಯಬರಲಿ ಮತ್ತು ಔಷಧಿ ಬಗ್ಗೆ ಅನಗತ್ಯ ಗೊಂದಲ ಮೂಡದಿರಲಿ ಎಂಬ ಉದ್ದೇಶದಿಂದ ಲಸಿಕೆ ಪಡೆದಿದ್ದೇನೆ. ಲಸಿಕೆ ಪಡೆದಾಗಿನಿಂದ ಯಾವುದೇ ಸಮಸ್ಯೆಯಾಗಿಲ್ಲ; ಮೊದಲು ಹೇಗಿದ್ದೇನೋ ಈಗಲೂ ಆಗೆಯೇ ಇದ್ದೇನೆ ಎಂದರು.
ಲಸಿಕೆ ಪಡೆದುಕೊಂಡ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಅವರು ಲಸಿಕೆ ಸುರಕ್ಷಿತವಾಗಿದೆ;ಯಾವುದೇ ಅಡ್ಡಪರಿಣಾಮಗಳಿಲ್ಲ. ಜನಸಾಮಾನ್ಯರು ಲಸಿಕೆ ಪಡೆದು ಕೊರೊನಾ ತೊಲಗುವ ಕಾಲ ಹತ್ತಿರವಿದೆ ಎಂದರು.
ಈ ಸಂದರ್ಭದಲ್ಲಿ ಡಿಎಚ್‍ಒ ಡಾ.ಜನಾರ್ಧನ್, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಮತ್ತಿತರರು ಇದ್ದರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;