ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಲ್ಲೂರಹಟ್ಟಿ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ ಪ್ರಾತ್ಯಕ್ಷಿತೆಯ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ ಅತಿಯಾದ ರಾಸಾಯನಿಕ ಗೊಬ್ಬರ ಬಳಕೆಯಿಂದ ಭೂಮಿ ಬರಡಾಗುತ್ತಿದೆ. ಮುಂದಿನ ದಿನದಲ್ಲಿ ಗುಣಮಟ್ಟದ ಆಹಾರ ಉತ್ಪನ್ನ ಬೆಳೆಯಲು ಭೂಮಿ ಸತ್ವ ಕಳೆದುಕೊಳ್ಳಲಿದೆ. ಆದ್ದರಿಂದ ರೈತರು ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳುವಂತೆ ಸಹಾಯಕ ಕೃಷಿ ನಿರ್ದೇಶಕ ಡಾ. ಮೋಹನಕುಮಾರ್ ಕಿವಿಮಾತು ಹೇಳಿದರು. ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ ಪ್ರಾತ್ಯಕ್ಷಿತೆಯ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ನೀರು ಅತ್ಯಮೂಲ್ಯ ವಸ್ತು. ಇದರ ಸದ್ಬಳಕೆ ಬಗ್ಗೆ ಜಾಗೃತರಾಗಬೇಕು. ಮಳೆ ನೀರನ್ನು ವ್ಯರ್ಥ ಮಾಡದೇ ಭೂಮಿಗೆ ಇಂಗಿಸುವ ಕೆಲಸವಾಗಬೇಕು. ಇಲ್ಲವಾದರೆ ಅಂತರ್ಜಲ ಕಡಿಮೆಯಾಗಿ ಪರಿಸರದಲ್ಲಿ ಅಸಮತೋಲನೆಯಾಗುತ್ತದೆ. ಈ ನಿಟ್ಟಿನಲ್ಲಿ ಮಳೆ ನೀರನ್ನು ಭೂಮಿಗೆ ಇಂಗಿಸುವ ಮೂಲಕ ಅತರ್ಜಲ ಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು. ಕೃಷಿ ವಿಜ್ಞಾನಿ ಪ್ರಕಾಶ್ ಕೆರೂರ್ ಮಾತನಾಡಿ, ರೈತರು ತಮ್ಮ ಜಮೀನುಗಳಲ್ಲಿ ಬದು ನಿರ್ಮಾಣ ಮಾಡಿಕೊಂಡು, ಮರ, ಗಿಡ ಬೆಳೆಸಿ ಪ್ರತಿಯೊಬ್ಬರು ಜಾನುವಾರು ಹೊಂದಬೇಕು, ತಮ್ಮ ಜಮೀನಿನಲ್ಲಿ ಮಣ್ಣು ನೀರನ್ನು ಪರೀಕ್ಷೆ ಮಾಡಿಸಿಕೊಂಡು ಮಣ್ಣು ನೀರಿನ ಅನುಗುಣವಾಗಿ ಬೆಳೆ ಬೆಳೆಯಬೇಕು. ಭೂಮಿಗೆ ದನಕೊಟ್ಟಿಗೆ ಗೊಬ್ಬರ, ಲಘು ಪೋಷಕಾಂಶಗಳಾದ ಜಿಂಕ್ ಹಾಕಬೇಕು. ಕೃಷಿ ಇಲಾಖೆ ಅಧಿಕಾರಿಗಳ ಹಾಗೂ ತಜ್ಞರ ಸಲಹೆ ಪಡೆದು ಹೊಸ ತಳಿ ಬಿತ್ತನೆ ಮಾಡುವ ಮೂಲಕ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡಾಗ ಉತ್ತಮ ಇಳುವರಿ ಹಾಗೂ ಆರೋಗ್ಯ ಪಡೆಯಲು ಸಾಧ್ಯ ಎಂದರು. ಸಹಾಯಕ ಕೃಷಿ ಅಧಿಕಾರಿ ಹೇಮಂತ್‌ನಾಯ್ಕ ಮತ್ತಿತರರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
