;

ಅಭಿವೃದ್ಧಿಯತ್ತ ಗಮನಹರಿಸಲಿ ಸರ್ಕಾರ: ಜಿ.ಪ ಸದಸ್ಯ ಡಾ.ಯೋಗೇಶ್ ಬಾಬು..!!

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು: ರಾಜ್ಯದಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬಂದಿರುವುದೇ ವಾಮ ಮಾರ್ಗ ದಲ್ಲಿ, ಇಂತಹ ಮಾರ್ಗಗಳನ್ನು ಬಿಟ್ಟು ಅಭಿವೃದ್ಧಿ ಮಾಡುವತ್ತ ಗಮನಹರಿಸಬೇಕಾಗಿದೆ ಎಂದು ಬಿ.ಜಿ.ಕೆರೆ ಜಿ.ಪಂ. ಸದಸ್ಯ ಡಾ.ಯೋಗೇಶ್ ಬಾಬು ಅಭಿಪ್ರಾಯಪಟ್ಟರು. ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮೊಳಕಾಲ್ಮುರು ತೀರ ಹಿಂದುಳಿದ ತಾಲ್ಲೂಕಾಗಿದ್ದು, ಇಲ್ಲಿನ ಜನ ಕೂಲಿಯಿಂದ ಜೀವನ ಸಾಗಿಸುವವರೇ ಹೆಚ್ಚು. ಇಂತಹ ಪ್ರದೇಶಕ್ಕೆ ಆಯ್ಕೆಯಾದ ಶಾಸಕರು ಸಚಿವರಾಗಿ ಆಯ್ಕೆ ಯಾದ ಮೇಲೂ ಅಭಿವೃದ್ಧಿ ಕಾಣದೇ ಇರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ದೂರಿದರು. ಹಾನಗಲ್ ಜಿ.ಪಂ.ಸದಸ್ಯ ಮುಂಡ್ರಗಿ ನಾಗರಾಜ್ ಮಾತನಾಡಿ, ದೇಶ ಅಭಿವೃದ್ಧಿ ಮಾಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;