ತೊಗರಿ ಬೆಂಬಲ ಬೆಲೆ: ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಲು ರೈತರಿಗೆ ಮನವಿ..! 

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮೂರು/ 2020-21ನೇ ಸಾಲಿನ ತೊಗರಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಖರೀದಿಸಲು ಸಹಕಾರ ಸಂಘಗಳ ನೋಂದಣಿ ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯ ಆದೇಶದಂತೆ ಸಹಕಾರ ಸಂಘಗಳಲ್ಲಿ ಪ್ರತಿ ರೈತರ ಫ್ರೂಟ್ ಐಡಿ, ಆಧಾರ್ ಕಾರ್ಡ್ ಮೂಲಕ ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಲು ರೈತರಿಗೆ ಮನವಿ ಮಾಡಲಾಗಿದೆ. ಪ್ರತಿ ರೈತರಿಗೆ ಒಂದು ಎಕರೆಗೆ 7.5 ಕ್ವಿಂಟಲ್‍ನಂತೆ ಗರಿಷ್ಠ 20 ಕ್ವಿಂಟಲ್, ಒಂದು ಕ್ವಿಂಟಲ್‍ನ ದರ ರೂ. 6000/-ಗಳನ್ನು ನಿಗದಿ ಪಡಿಸಿದ್ದು, ಫೆಬ್ರುವರಿ 09 ರಿಂದ 28ರ ವರೆಗೆ ನೋಂದಣಿ ಮಾಡಿಸಲು ರೈತರಿಗೆ ಸೂಚನೆ ನೀಡಲಾಗಿದೆ. ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಟಿಎಪಿಸಿಎಂನಲ್ಲಿ ನೋಂದಣಿ ಮಾಡಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಜಿಲ್ಲಾ ವ್ಯವಸ್ಥಾಪಕ ಜಿ.ಆರ್.ರಾಜಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend