ರಾಂಪುರ: ಜಿಲ್ಲಾಮಟ್ಟದ ತಂಬಾಕು ತನಿಖಾತಂಡದಿಂದ ಮಾರಾಟ ಅಂಗಡಿ ಮೇಲೆ ದಾಳಿ..!!

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು: ತಾಲೂಕಿನ ರಾಂಪುರ ಜಿಲ್ಲಾಮಟ್ಟದ ತಂಬಾಕು ತನಿಖಾತಂಡದಿಂದ ರಾಂಪುರದ ಹಲವೆಡೆ ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ ನಡೆಸಿ ದಂಡ ವಿಧಿಸಿದ್ದಾರೆ.< ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ ನಡೆಸಿ 18 ಪ್ರಕರಣಗಳನ್ನು ದಾಖಲಿಸಿ 1550 ರು. ದಂಡ ಮತ್ತು ಸೆಕ್ಷನ್-6ಎ ಅಡಿಯಲ್ಲಿ 16 ಕೇಸ್‌ಗಳನ್ನು ದಾಖಲಿಸಿ 1350 ರು. ದಂಡವನ್ನು ವಸೂಲಿ ಮಾಡಲಾಯಿತು. ಇದೇ ವೇಳೆ ಕೋಟ್ಟಾ-2003ರ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು. ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ. ಎಂ. ಪ್ರಭುದೇವ್, ರಾಂಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮೊಹಮ್ಮದ್ ಫಾರುಕ್‌, ಕಿರಿಯ ಪುರುಷ ಆರೋಗ್ಯ ಸಹಾಯಕರಾದ ಪಿ. ಕಾಂತರಾಜ್, ಪೊಲೀಸ್ ಇಲಾಖೆಯ ಟಿ.ಎಸ್.ಆನಂದ್, ಗ್ರಾಮ ಪಂಚಾಯಿತಿ ಸಿಬ್ಬಂದಿ ಗಂಗಾಧರ್, ಬಿ.ತಿಮ್ಮಣ್ಣ ಶಿವರಾಮು, ಹನುಮಂತಪ್ಪ, ದುರುಗೇಶ್, ಸಮಾಜ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ ಇದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend