ವರದಿ. ಎಚ್ಚರಿಕೆ ಪತ್ರಿಕಾ ವರದಿಗಾರ

ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದಲ್ಲಿ.ಇಂದು ದಿನಾಂಕ 18- 2- 2021 ರಂದು ಗುರುವಾರ ಬೆಳಗ್ಗೆ ಶ್ರೀಮತಿ ಎಂಪಿ ವೀಣಾ ಮಹಾಂತೇಶ್, ಮಾಧ್ಯಮ ವಿಶ್ಲೇಷಕರು ಕೆಪಿಸಿಸಿ ಮತ್ತು ಕಾಂಗ್ರೆಸ್ ಮುಖಂಡರು ಹರಪನಹಳ್ಳಿ ಕ್ಷೇತ್ರ ಅವರ ನೇತೃತ್ವದಲ್ಲಿ ಕೇಂದ್ರ ರಾಜ್ಯ ಸರಕಾರದ ವಿರುದ್ದ ಬೃಹುತ್ ಪ್ರತಿಭಟನಾ ರಾಲಿಯನ್ನು ಹಮ್ಮಿಕೊಳ್ಳಲಾಗಿತ್ತು .

ರೈತರು , ರೈತ ಹಿತಾಸಕ್ತರು , ಸ್ಥಳೀಯ ಕಾಂಗ್ರೆಸ್ ಮುಖಂಡರು ,ಕಾರ್ಯಕರ್ತರು , NSUI ಮತ್ತು ಯುವ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕರ್ತರು, ಗ್ರಾಮ ಪಂಚಾಯತ್ ಅಧ್ಯಕ್ಷರುಗಳು ಮತ್ತು ಉಪಾಧ್ಯಕ್ಷರುಗಳು , ಗ್ರಾಮ ಪಂಚಾಯತಿ ಸದಸ್ಯರುಗಳು, ರೈತ ಮುಖಂಡರು ಮತ್ತು ರೈತ ಮಹಿಳೆಯರು , ವಿವಿಧ ಪ್ರಗತಿಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು .
ಬೆಳಗ್ಗೆ 10 ಗಂಟೆಗೆ ದೇವರ ತಿಮ್ಲಾಪುರದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಪ್ರಾರಂಭವಾಗಿ, ಹರಪನಹಳ್ಳಿ ಪಟ್ಟಣದ ಮೂಲಕ ಮಿನಿ ವಿಧಾನಸೌಧಕ್ಕೆ ತೆರಳಿ *ತಹಸೀಲ್ದಾರ ಮತ್ತು ಸಹಾಯಕ ಆಯುಕ್ತರ ಮುಖಾಂತರ ಗೌರವಾನ್ವಿತ ರಾಜ್ಯಪಾಲರು ಮತ್ತು ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಯಿತು*. ಮನವಿಯಲ್ಲಿ ಪ್ರಸ್ತಾಪಿಸಿದ ಮುಖ್ಯ ಅಂಶಗಳು
1. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ರದ್ದು ಪಡಿಸಬೇಕು ,
2. ದೆಹಲಿಯಲ್ಲಿ ಹೋರಾಡುತ್ತಿರುವ ರೈತರಿಗೆ ಬೆಂಬಲ ಸೂಚಿಸಲು, ಸುಗ್ರೀವಾಜ್ಞೆ ಮುಖಾಂತರ ತಂದಿರುವ ಈ ತಿದ್ದುಪಡಿಗಳನ್ನು ಹಿಂಪಡೆಯಬೇಕು ,
3. ರೈತರ ಹಿತಾಸಕ್ತಿಗಳನ್ನು ಕಾಪಾಡ ಬೇಕು ,
4. ಚಳವಳಿ ನಿರತ ರೈತರ ವಿರುದ್ಧ ದಾಖಲಾಗಿರುವ ಪೈರಿನ ಕುಳೆ ಸುಟ್ಟಿರುವ ಪ್ರಕರಣಗಳೂ ಸೇರಿದಂತೆ 12000 ಮೊಕದ್ದಮೆಗಳನ್ನು ವಾಪಸ್ ತೆಗೆದು ಕೊಳ್ಳಬೇಕು.
5. ಎಂ.ಎಸ್. ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರಬೇಕು ,
6. ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಗ್ಯಾಸ್ ಸಿಲೆಂಡರ್ ಪೆಟ್ರೋಲ್ ಡೀಸೆಲ್ ,ಮುಂತಾದ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಲು ವಿಫಲವಾಗಿರುವ ಕೇಂದ್ರ ಸರ್ಕಾರಕ್ಕೆ ಕೂಡಲೇ ನಿರ್ದೇಶನ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಲಾಯಿತು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
