ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

*ದಿನಾಂಕ 19 .2.2021 ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ*
*ತಾಲೂಕಿನ ಕಾನಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ದಿನಾಂಕ* *18-2-2021 ವಿಶೇಷ ಸಭೆ ಜರಗಿತು.* ಈ ಸಭೆಯಲ್ಲಿ ತಾಲೂಕು ಪಂಚಾಯತಿ ಅಧಿಕಾರಿಗಳಾದ ಬಸಣ್ಣನವರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನೀಲಮ್ಮ ಬೊಮ್ಮಣ್ಣ ನವರು ಹಾಗೂ ಉಪಾಧ್ಯಕ್ಷರಾದ ಬೋರಯ್ಯ ನವರು ಹಾಗೂ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರ ಸಮ್ಮುಖದಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಯಿತು ಮೊದಲನೇದಾಗಿ ಬೇಸಿಗೆಯ ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ಮಹತ್ವ ಕೊಡಲಾಯಿತು ನಂತರ ಗ್ರಾಮ ಪಂಚಾಯಿತಿಗೆ ಸರ್ಕಾರದಿಂದ ಬರುವ ಅನುದಾನಗಳ ಬಗ್ಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸದಸ್ಯರಿಗೆ ಮಾಹಿತಿ ನೀಡಿದರು ಮೊದಲನೆಯದಾಗಿ ತಾಲೂಕ್ ಪಂಚಾಯತಿ ಅಧಿಕಾರಿಗಳಾದ ಬಸಣ್ಣನವ ರಿಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ನೀಲಮ್ಮ ಬೊಮ್ಮಯ್ಯ ನವರಿಂದ ಹೂವಿನ ಹಾರ ಹಾಕುವ ಮೂಲಕ ಸನ್ಮಾನಿಸಲಾಯಿತು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಸನ್ಮಾನ ಮಾಡುವುದರ ಮೂಲಕ ನೂತನ ಗ್ರಾಮ ಪಂಚಾಯಿತಿ ಸದಸ್ಯರಿಗೆ ಅಧ್ಯಕ್ಷರಿಗೆ ಪರಿಚಯಿಸಲಾಯಿತು ಇನ್ನೂ ಅನೇಕ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಯಿತು. ಈ ಒಂದು ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಗ್ರಾಮಪಂಚಾಯಿತಿಯ ಡಿ ಗ್ರೂಪ್ ನೌಕರರು ಎಲ್ಲ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. *ಡಿ ಎಂ ಈಶ್ವರಪ್ಪ ಸಿದ್ದಾಪುರ*
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
