ವರದಿ. ಸುರೇಶ್ ಹೊಳಲ್ಕೆರೆ

ಕಾಂಗ್ರೆಸ್ ಬೆಂಬಲಿತ ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಸನ್ಮಾನ..
ಹೊಳಲ್ಕೆರೆ ತಾಲೂಕಿನಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಬೆಂಬಲಿತ ನೂತನ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು., ಮತ್ತು ಸದಸ್ಯರುಗಳಿಗೆ. ಹೊಳಲ್ಕೆರೆಯ ಒಂಟಿಕಂಭದ ಮಠದ ಹತ್ತಿರವಿರುವ ಬಸವ ಭವನದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಾಜಿ ಸಚಿವ ಹೆಚ್ ಆಂಜನೇಯನವರು ನೂತನ ಗ್ರಾಮ ಪಂಚಾಯ್ತಿ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ, ಸನ್ಮಾನ ಮಾಡಿದರು . ಇದೇ ವೇಳೆ ಮಾತನಾಡಿದ ಆಂಜನೇಯನವರು ಗ್ರಾಮೀಣ ಭಾಗದಲ್ಲಿ ನೂತನವಾಗಿ ಆಯ್ಕೆಯಾಗಿರುವ ಸದಸ್ಯರುಗಳು ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡಿ ಎಂದು ಸಲಹೆ ನೀಡಿದರು. ಇನ್ನು ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಉಮಾಪತಿ, ಹಾಗೂ ಜಿಲ್ಲಾ ಪಂಚಾಯ್ತಿ ಮಾಜಿ ಉಪಾದ್ಯಕ್ಷರಾದ ತಾಳಿ ಕಟ್ಟೆ ಗಂಗಾಧರ್, ಸೇರಿದಂತೆ ಇನ್ನು ಇತರೆ ಕಾಂಗ್ರೆಸ್ ಮುಖಂಡರುಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
