ನೂತನ ಸದಸ್ಯರು ಹಾಗೂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ….!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

*ದಿನಾಂಕ 20.2.2021 ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕು.– ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತಿ ರಾಜ್ ಇಲಾಖೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಅಡಿಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಹುರುಳಿಹಾಳು ಗ್ರಾಮ ಪಂಚಾಯಿತಿ ಅಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ಯಾ ಸದಸ್ಯರು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಗಳಿಗೆ ಐದು ದಿನಗಳ ಕಾಲ ಮುಖಾಮುಖಿ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ನೀಡಲಾಯಿತು ಹಾಗೂ ಸಾಮರ್ಥ್ಯ ಸೌಧ ಕೂಡ್ಲಿಗಿ ಯಲ್ಲಿ ಗುಡೇಕೋಟೆ ರಾಮದುರ್ಗ ಗ್ರಾಮಪಂಚಾಯತಿಯ ನೂತನ ಸದಸ್ಯರ ಹಾಗೂ ಅಧ್ಯಕ್ಷರು ಉಪಾಧ್ಯಕ್ಷರು ಗಳಿಗೆ ಸಹ ಐದು ದಿನದ ತರಬೇತಿ ಕಾರ್ಯಕ್ರಮ ಕೊಡಲಾಯಿತು ನಂತರ ಇದೇ ದಿನ ತರಬೇತಿ ಪಡೆದ ಗ್ರಾಮಪಂಚಾಯಿತಿಗಳ ಸದಸ್ಯರುಗಳಿಗೆ ಅಧ್ಯಕ್ಷರುಗಳಿಗೆ ಉಪಾಧ್ಯಕ್ಷರುಗಳಿಗೆ ತರಬೇತಿ ಪ್ರಮಾಣ ಪತ್ರ ಹಾಗೂ ಗೌರವಧನ ನೀಡಲಾಯಿತು.ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಅಧಿಕಾರಿಗಳು ಗ್ರಾಮ ಪಂಚಾಯತ್ ಸದಸ್ಯರು ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend