;

ಹೂಡೆಮ್ ಗ್ರಾಮಪಂಚಾಯಿತಿ ವತಿಯಿಂದ ಮಕ್ಕಳ ಸ್ನೇಹಿ ಸಭೆ…!!!

ವರದಿ. ವಿರೇಶ್ ಎಚ್ಚರಿಕೆ ಪತ್ರಿಕೆ ವರದಿಗಾರರು

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಹುಡೆಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಿನಾಂಕ 26-02- 2021 ನೇ ಶುಕ್ರವಾರದಂದು ಗ್ರಾಮ ಪಂಚಾಯಿತಿ ಗ್ರಂಥಾಲಯ ವತಿಯಿಂದ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಗ್ರಾಮ ಸಭೆ ಸರ್ಕಾರಿ ಪ್ರೌಢಶಾಲೆ ತಾಯಕನಹಳ್ಳಿ ಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕರು ರಂಗಪ್ಪ ಸರ್ ಪ್ರಾರ್ಥನೆ ಮಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು 10ನೇ ತರಗತಿಯ ವಿದ್ಯಾರ್ಥಿ ದಾವಿದ್ ಅವರು ಹಾಗೂ ಉಪಾಧ್ಯಕ್ಷ ತೆಯನ್ನು 10ನೇ ತರಗತಿಯ ವಿದ್ಯಾರ್ಥಿನಿ ಯಶಸ್ವಿನಿ ಅವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಕರಿಬಸಮ್ಮ ದುರುಗಪ್ಪ ಹಾಗೂ ಉಪಾಧ್ಯಕ್ಷರಾದ ಕೆ. ಎನ್.ರಾಘವೇಂದ್ರ. ಹಾಗೂ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಇರ್ಫಾನ್ ಸರ್ ಮಾಡಿದರು. ಶಿಕ್ಷಕಿ ರಾಜೇಶ್ವರಿ ಪೂಜಾರ್ ಸ್ವಾಗತ ಕೋರಿದರು. ಪ್ರಾಸ್ತಾವಿಕ ನುಡಿಗಳನ್ನು ಗೋವಿಂದಪ್ಪ ಸರ್ ತಿಳಿಸಿದರು. ಶ್ರೀ ಕಂಪಳ ರಂಗ ಪ್ರೌಢಶಾಲಾ ಮುಖ್ಯ ಗುರುಗಳಾದ ಅಜ್ಜಪ್ಪ ಸರ್ ಇವರು ಶಿಕ್ಷಣದ ಮಹತ್ವವನ್ನು ಕುರಿತು ಮಾತನಾಡಿದರು. ಮುಖ್ಯ ಶಿಕ್ಷಕರಾದ ರಂಗಪ್ಪ ಸರ್ ಮಾತನಾಡಿ. ಓದುವ ಬೆಳಕು ಕಾರ್ಯಕ್ರಮ ಮಕ್ಕಳಿಗೆ ಒಂದು ಒಳ್ಳೆಯ ಕಾರ್ಯಕ್ರಮವಾಗಿದೆ. ಇದರ ಸದುಪಯೋಗವನ್ನು ಮಕ್ಕಳು ಪಡೆದು ಕೊಳ್ಳಲು ತಿಳಿಸಿ. ಮನಸಿದ್ದರೆ ಮಾರ್ಗ, ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ಸಾಧಿಸುವ ಛಲ ಮನುಷ್ಯನಿಗೆ ಬೇಕು ಎಂದು ತಿಳಿಸಿದರು. ರಾಜಗೋಪಾಲ್ ಸರ್ ಮಾತನಾಡಿ ಮಹಾನ್ ವ್ಯಕ್ತಿಗಳು ಎಲ್ಲರೂ ಗ್ರಂಥಾಲಯದ ಪುಸ್ತಕಗಳನ್ನು ಓದಿ ಮಹನೀಯ ರಾಗಿರುವುದು . ಮಕ್ಕಳಾದ ನೀವೆಲ್ಲರೂ ಅವರಂತೆ ಗ್ರಂಥಾಲಯದ ಪುಸ್ತಕಗಳನ್ನು ಹೆಚ್ಚು ಹೆಚ್ಚು ಓದುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ತಿಳಿಸಿದರು. ಗ್ರಂಥಾಲಯ ಮೇಲ್ವಿಚಾರಕರು ಗುರುರಾಜ್ ಮಾತನಾಡಿ ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾನಿಲಯಗಳು, ಸಾರ್ವಜನಿಕರು ಮತ್ತು ಶಾಲಾ ಮಕ್ಕಳು ಇದರ ಸದುಪಯೋಗವನ್ನು ಪಡೆದುಕೊಂಡು ಓದುವ ಹವ್ಯಾಸ ಬೆಳೆಸಿಕೊಳ್ಳಲು ತಿಳಿಸಿದರು. ಮತ್ತು ಅತಿಥಿಗಳ ಸಮ್ಮುಖದಲ್ಲಿ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮಹಂತೇಶ್ ಸ್ವಾಮಿ, ಬಿಲ್ ಕಲೆಕ್ಟರ್ ತಿಪ್ಪೇರುದ್ರಪ್ಪ ,ಕಂಪ್ಯೂಟರ್ ಆಪರೇಟರ ತಿಪ್ಪೇಸ್ವಾಮಿ, ಹಾಗೂ ಸಿಬ್ಬಂದಿಯವರು, ಮತ್ತು ಎಲ್ಲಾ ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು, ಮತ್ತು ಪ್ರೌಢಶಾಲೆಯ ಶಿಕ್ಷಕರಾದ ರಮೇಶ್ ಸರ್ , ಶಿಕ್ಷಕಿಗೌರಮ್ಮ ಕೋಟಗಿ , ಕರಿಯಪ್ಪ ಸರ್ ,ವಿಶಾಲಾಕ್ಷಿ ಮೇಡಂ, ಸುಮಂಗಲ ಮೇಡಂ ,ಅಂಗನವಾಡಿ ಕಾರ್ಯಕರ್ತೆಯರು , ಆಶಾ ಕಾರ್ಯಕರ್ತೆಯರು ಮತ್ತು ಊರಿನ ಸಾರ್ವಜನಿಕರು, ಪ್ರೀತಿಯ ಮಕ್ಕಳು ಭಾಗವಹಿಸಿದ್ದರು. ಕಾರ್ಯಕ್ರಮದ ವಂದನಾರ್ಪಣೆಯನ್ನು ಮಚ್ಚೇಂದ್ರಪ್ಪ ಸರ್ ಮಾಡಿದರು. ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು..

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;