ವರದಿ.ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು ಕೇಂದ್ರ ಮತ್ತು ರಾಜ್ಯ ಮಟ್ಟದ ಮಹಿಳಾ ಮೋರ್ಚಾ ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವ ಮೂಲಕ ಪಕ್ಷದಲ್ಲಿ ಮಹಿಳೆಯರ ಸಂಘಟನೆಯನ್ನು ಬಲಪಡಿಸಬೇಕೆಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶೈಲಜಾರೆಡ್ಡಿ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ತಾಲೂಕು ಬಿಜೆಪಿ ಮಹಿಳಾ ಮೋರ್ಚಾದಿಂದ ಆಯೋಜಿಸಿದ್ದ ಮಹಿಳಾ ಮೋರ್ಚಾ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿಯಲ್ಲಿ ಮಹಿಳಾ ಸಂಘಟನೆ ಬಲಿಷ್ಠವಾಗಲು ಮಹಿಳೆಯರು ಸಂಘಟಿತರಾಗಬೇಕು. ಪ್ರಧಾನಿ ಮೋದಿ ಅವರಿಗೆ ಇರುವ ರಾಷ್ಟ್ರ ಭಕ್ತಿ ಮತ್ತು ಸರ್ಕಾರದ ಜನಪ್ರಿಯ ಕಲ್ಯಾಣ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಿಳಿಸಬೇಕು. ಮಹಿಳೆಯರು ಬೂತ್ ಮಟ್ಟದಲ್ಲಿ ಸಂಘಟನೆಯಾಗಬೇಕು. ಕ್ಷೇತ್ರದಲ್ಲಿ ಸಚಿವರು ಇರುವುದು ಬಿಜೆಪಿ ಪಕ್ಷಕ್ಕೆ ಇನ್ನಷ್ಟು ಬಲ ಸಿಕ್ಕಿದೆ. ಸಚಿವರ ಮಾರ್ಗದರ್ಶನ ಮತ್ತು ಕೇಂದ್ರ ಮತ್ತು ರಾಜ್ಯ ಮಟ್ಟದ ಮಹಿಳಾ ಮೋರ್ಚದ ಸೂಚನೆಗಳನ್ನು ಪಾಲನೆ ಮಾಡುವ ಮೂಲಕ ಪಕ್ಷವನ್ನು ಗಟ್ಟಿಗೊಳಿಸಬೇಕೆಂದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಡಾ.ಪಿ.ಎಂ. ಮಂಜುನಾಥ ಮಾತನಾಡಿ ತಾಲೂಕಿನಲ್ಲಿ ಈ ಬಾರಿ ಗ್ರಾಪಂ ಚುನಾವಣೆಯಲ್ಲಿ ಅರ್ಧದಷ್ಟು ಮಹಿಳಾ ಸದಸ್ಯರು ಆಯ್ಕೆಯಾಗಿದ್ದಾರೆ. ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶ ಸಿಗುತ್ತಿವೆ.ಮಹಿಳಾ ಮೋರ್ಚ ತಾಲೂಕಿನಲ್ಲಿ ಬಲಿಷ್ಠವಾಗಿದೆ. ಪಕ್ಷದ ಪದಾಧಿಕಾರಿಗಳು ತಾಲೂಕಿನ ಪ್ರತಿ ಗ್ರಾಮದ ವಾರ್ಡುಗೂ ಬೇಟಿ ನೀಡಿ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದರು. ಕಾರ್ಯದರ್ಶಿ ಭುವನೇಶ್ವರಿ ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಸರ್ವಮಂಗಳ, ಶೋಭಾ ವಿನಯಕುಮಾರ್, ಸವಿತ, ಪಟ್ಟಣ ಪಂಚಾಯಿತಿ ಸದಸ್ಯರಾದ ಶುಭ ಪೃಥ್ವಿರಾಜ್, ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
